Advertisement

ಸಮಾಜ ಒಡೆಯುವ ಪ್ರಯತ್ನ ಸಲ್ಲ

01:25 PM Jul 09, 2018 | |

ಸಿಂಧನೂರು: ರಾಜ್ಯದ ಅತೀ ದೊಡ್ಡ ಹಾಗೂ ಇತರ ಸಮಾಜಗಳಿಗೆ ಮಾದರಿಯಾಗಿದ್ದ ವೀರಶೈವ ಸಮಾಜ ಒಡೆಯುವ ಪ್ರಯತ್ನಗಳು ನಡೆದಿರುವುದು ಸರಿಯಲ್ಲ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ಅಭಿಪ್ರಾಯಪಟ್ಟರು.

Advertisement

ತಾಲೂಕು ವೀರಶೈವ ಸಮಾಜ ಹಾಗೂ ಅಖೀಲ ಭಾರತ ವೀರಶೈವ ಮಹಾಸಭಾದಿಂದ ನಗರದ ಕೋಟೆ ವೀರಣ್ಣ ಕಲ್ಯಾಣ ಮಂಟಪದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವೀರಶೈವ ಹಾಗೂ ಲಿಂಗಾಯತ ಎರಡೂ ಒಂದೇ. ಆದರೆ ಪ್ರಸ್ತುತ ದಿನಗಳಲ್ಲಿ ಸಮಾಜ ಯಾವ  ದಿಕ್ಕಿನತ್ತ ಸಾಗುತ್ತಿದೆ ಎನ್ನುವುದನ್ನು ನೋಡಿದರೆ ವಿಷಾದವೆನಿಸುತ್ತದೆ. ಬಡವರಿಗೆ, ತುಳಿತಕ್ಕೊಳಗಾದ ಸಮಾಜ ಆಸರೆಯಾಗಬೇಕಾಗಿದೆ ಎಂದರು.

ಸಮಾಜದ ಸಂಘಟನೆ ಇನ್ನೊಂದು ಸಮಾಜದ ವಿರುದ್ಧವಲ್ಲ. ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅನಿವಾರ್ಯವಾಗಿದೆ. ಸಮಾಜದಲ್ಲಿ ಕೊಡುವ ಕೈಗಳಿಗೆ ಕೊರತೆಯಿಲ್ಲ. ಪ್ರಾಮಾಣಿಕತೆಯಿಂದ ಮಾಡುವ ಮನಸ್ಸು ಬೇಕಾಗಿದೆ. ಸಿಂಧನೂರು ತಾಲೂಕಿನಲ್ಲಿ ಅತೀ ದೊಡ್ಡ ವೀರಶೈವ ಸಮಾಜಕ್ಕೆ ಕಲ್ಯಾಣ ಮಂಟಪ ಇಲ್ಲ ಎನ್ನುವುದು ತಲೆ ತಗ್ಗಿಸಬೇಕಾದ ವಿಷಯವಾಗಿದೆ. ಸಣ್ಣ ಸಣ್ಣ ಸಮಾಜಗಳು ಸಂಘಟನೆಗೊಂಡು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿವೆ. ಸಮಾಜದ ಕೆಲಸ ಮಾಡಲು ತಾವು ಸದಾಸಿದ್ದ. ವೀರಶೈವ ಸಮಾಜದ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.

ಹೂಗಾರ ಪ್ರಶಸ್ತಿ ಪಡೆದ ವೀರಶೈವ ಸಮಾಜದ ಪತ್ರಕರ್ತ ಅಶೋಕ ಬೆನ್ನೂರ ಅವರನ್ನು ಸನ್ಮಾನಿಸಲಾಯಿತು. ಕಲ್ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕರಿಬಸವ ನಗರದ ಶ್ರೀ ಸೋಮನಾಥ ಶಿವಾಚಾರ್ಯರು, ಯದ್ದಲದೊಡ್ಡಿಯ ಶ್ರೀ ಮಹಾಲಿಂಗ ಸ್ವಾಮೀಜಿ, ವೆಂಕಟಗಿರಿ ಕ್ಯಾಂಪಿನ ಸಿದ್ದರಾಮ ಶರಣರು ಸಾನಿಧ್ಯ ವಹಿಸಿದ್ದರು. ವೀರಶೈವ ಸಮಾಜ ಅಧ್ಯಕ್ಷ ಅಶೋಕಗೌಡ ಗದ್ರಟಗಿ, ಮಹಾಸಭಾ ಅಧ್ಯಕ್ಷ ಎನ್‌.ಶಿವನಾಗಪ್ಪ ಇತರರು ವೇದಿಕೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next