ಬೆಳಗಾವಿ: ರೈತರು ಸೌರಶಕ್ತಿ ವಿದ್ಯುತ್ ಆಧಾರಿತ ಕೃಷಿ ಪಂಪ್‌ಸೆಟ್‌ಗಳ ಅಳವಡಿಕೆಗೆ ಮುಂದಾದರೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಒಟ್ಟಾರೆ ಶೇ.80ರಷ್ಟು ಸಬ್ಸಿಡಿ ನೀಡಲಾಗುವುದು. ರಾಜ್ಯದ ಸುಮಾರು 400 ವಿದ್ಯುತ್ ಉಪಕೇಂದ್ರಗಳನ್ನು ಸೋಲಾರ್ ಕೇಂದ್ರಗಳಾಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಭರಮಗೌಡ ಕಾಗೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ಪಂಪ್‌ಸೆಟ್‌ಗಳು ವಿದ್ಯುತ್ ಜಾಲದಿಂದ 500 ಮೀಟರ್ ಒಳಗೆ ಇದ್ದರೆ ವಿದ್ಯುತ್ ಸಂಪರ್ಕದ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. 500 ಮೀಟರ್‌ಗಿಂತ ಹೆಚ್ಚಿನ ಅಂತರದಲ್ಲಿದ್ದರೆ ಸಂಪರ್ಕ ಸೌಲಭ್ಯಗಳನ್ನು ರೈತರು ಸ್ವಯಂ ಕಾರ್ಯ ನಿರ್ವಹಣೆಯಡಿ ಕೈಗೊಳ್ಳಬೇಕು. ಇಲ್ಲವೇ ಸೋಲಾರ್ ಕೃಷಿ ಪಂಪ್‌ಸೆಟ್ ಅಳವಡಿಕೆಗೆ ಮುಂದಾದರೆ ರಾಜ್ಯ ಸರಕಾರದಿಂದ ಶೇ.50 ಹಾಗೂ ಕೇಂದ್ರದಿಂದ ಶೇ.30 ಸೇರಿ ಒಟ್ಟು ಶೇ.80 ಸಬ್ಸಿಡಿ ನೀಡಲಾಗುತ್ತದೆ ಎಂದರು.
ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಕ್ರಮ ದೊಡ್ಡ ಸವಾಲಾಗುತ್ತಿದೆ. ಪ್ರಸ್ತುತ ರಾಜ್ಯ
ದಲ್ಲಿ 4 ಲಕ್ಷ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಅಗತ್ಯವಿದ್ದು, ಇದಕ್ಕಾಗಿ ಅಂದಾಜು 6 ಸಾವಿರ ಕೋಟಿ ರೂ.ಅಗತ್ಯವಿದೆ. ಈ ವರ್ಷ ಸುಮಾರು 70-80 ಸಾವಿರ ಕೃಷಿ ಪಂಪ್‌ಸೆಟ್‌ಗಳ ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಗೆ ಎರಡು ಜಿಟಿಟಿಸಿ ಕೇಂದ್ರಕ್ಕೆ ಚಿಂತನೆ: ಶರಣಪ್ರಕಾಶ
ಬೆಳಗಾವಿ: ಪ್ರತಿ ಜಿಲ್ಲೆಗೆ ಒಂದರಂತೆ ಜಿಟಿಟಿಸಿ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಗೆ ಎರಡು ಜಿಟಿಟಿಸಿ ಕೇಂದ್ರ ಆರಂಭಿಸುವ ಚಿಂತನೆ ಇದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಬೇಕಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ| ಶರಣಪ್ರಕಾಶ ಪಾಟೀಲ್ ಹೇಳಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎನ್.ಟಿ. ಶ್ರೀನಿವಾಸ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಜಿಟಿಟಿಸಿ ಕೇಂದ್ರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶಾಸಕರು ಬಳ್ಳಾರಿ ಜಿಲ್ಲೆಯ ಕೂಡ್ಲಗಿಯಲ್ಲಿ ಜಿಟಿಟಿಸಿ ಕೇಂದ್ರ ಆರಂಭಕ್ಕೆ ಕೇಳಿದ್ದು, ಈಗಾಗಲೇ ಬಳ್ಳಾರಿಯಲ್ಲಿ ಜಿಟಿಟಿಸಿ ಇರುವುದರಿಂದ ಮತ್ತೂಂದು ಕೇಂದ್ರ ಆರಂಭ ಸಾಧ್ಯವಿಲ್ಲ ಎಂದರು.