ಮಂಗಳೂರು/ಉಡುಪಿ: ಪಾರ್ಶ್ವ ಸೂರ್ಯಗ್ರಹಣ ಅ. 25ರಂದು ಸಂಜೆ ಸಂಭವಿಸಲಿರುವ ಹಿನ್ನೆಲೆಯಲ್ಲಿ ಉಡುಪಿ, ದ.ಕ. ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ದೇವರ ದರ್ಶನ, ನಿತ್ಯಪೂಜೆ ಹಾಗೂ ಧಾರ್ಮಿಕ ಅನುಷ್ಠಾನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಶ್ರೀ ಕ್ಷೇತ್ರ ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲ, ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನ, ಕಮಲಶಿಲೆ ಬ್ರಾಹ್ಮಿà ದುರ್ಗಾಪರಮೇಶ್ವರಿ ದೇವಸ್ಥಾನ, ಉಡುಪಿ ಶ್ರೀ ಕೃಷ್ಣಮಠ, ಮಂದರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ, ಕುಂಭಾಶಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಸಹಿತ ವಿವಿಧ ದೇವಾಲಯಗಳಲ್ಲಿ ಮಧ್ಯಾಹ್ನದ ಪೂಜೆ ಸಹಿತ ವಿವಿಧ ಧಾರ್ಮಿಕ ಅನುಷ್ಠಾನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಪಾರ್ಶ್ವ ಸೂರ್ಯಗ್ರಹಣ ವೀಕ್ಷಣೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ವತಿಯಿಂದ ಪಣಂಬೂರು ಕಡಲ ತೀರದಲ್ಲಿ, ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ವತಿಯಿಂದ ಮಲ್ಪೆ ಬೀಚ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಗ್ರಹಣವು ಸಂಜೆ 5.08ಕ್ಕೆ ಆರಂಭವಾಗಿ ಸುಮಾರು 5.50ಕ್ಕೆ ಗರಿಷ್ಠ ಪ್ರಮಾಣದಲ್ಲಿರುತ್ತದೆ. ಸಂಜೆ 6.06ಕ್ಕೆ ಗ್ರಹಣದೊಂದಿಗೆ ಸೂರ್ಯಾಸ್ತವಾಗಲಿದೆ. ಗ್ರಹಣವು 6.28ಕ್ಕೆ ಮುಕ್ತಾಯವಾಗಲಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಖಗೋಳ ವೀಕ್ಷಕರ ಸಂಘದ ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ : ವಿಶ್ವಕಪ್ ನಲ್ಲಿ ವಿಂಡೀಸ್ ಗೆ ಆಘಾತ; ಕೋಚ್ ಹುದ್ದೆಯಿಂದ ಕೆಳಗಿಳಿದ ಫಿಲ್ ಸಿಮನ್ಸ್