Advertisement

Solar Project: 300 ಮೆ.ವ್ಯಾ. ಸೌರ ವಿದ್ಯುತ್‌ ಖರೀದಿಗೆ ಜೆಎಸ್‌ಡಬ್ಲ್ಯೂ ಸಹಿ: ಜಾರ್ಜ್‌

01:47 AM Sep 07, 2024 | Team Udayavani |

ಬೆಂಗಳೂರು: ಪಾವಗಡದ ಸೋಲಾರ್‌ ಪಾರ್ಕ್‌ನಲ್ಲಿ 300 ಮೆಗಾ ವ್ಯಾಟ್‌ ಸೌರ ಯೋಜನೆ ಸಂಬಂಧ ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತದೊಂದಿಗೆ ಜೆಎಸ್‌ಡಬ್ಲ್ಯೂ ಅಂಗ ಸಂಸ್ಥೆ ಜೆಎಸ್‌ಡಬ್ಲ್ಯೂ  ರಿ ನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್‌ ವಿದ್ಯುತ್‌ ಖರೀದಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

Advertisement

ಇಂಧನ ಸಂರಕ್ಷಣೆ, ಸ್ವತ್ಛ ಮತ್ತು ಹಸುರು ಇಂಧನ ಉಪಕ್ರಮಗಳಿಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ದೊಡ್ಡ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ. 2044ರ ಹಣಕಾಸು ವರ್ಷದವರೆಗೆ ಪ್ರತೀ ಕಿ.ವ್ಯಾ.ಎಚ್‌ ಗೆ 2.89 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಮಾಡಲಿದ್ದು ಯೋಜನೆಯು 18 ತಿಂಗಳೊಳಗೆ ಕಾರ್ಯಾರಂಭಿಸುವ ನಿರೀಕ್ಷೆ ಇದೆ. ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತ 2024ರ ಜುಲೈ 22ರಂದು ಒಪ್ಪಿಗೆ ಪತ್ರ ನೀಡಿತ್ತು. ಈಗ ವಿದ್ಯುತ್‌ ಖರೀದಿ ಒಪ್ಪಿಗೆ ಸಿಕ್ಕಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನವೀಕರಿಸಬಹುದಾದ ಇಂಧನ ನೀತಿಯನ್ನು 2009ರಲ್ಲೇ  ಅಧಿಸೂಚಿಸಿದ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕ. ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ಸರ್ಕಾರ ಗಮನಹರಿಸಿದೆ. ಇದರಿಂದ ರಾಜ್ಯದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹವಾಮಾನ ಬದಲಾವಣೆ, ಜಾಗತಿಕ ತಾಪಮಾನದ ಸವಾಲು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಸಾಂಪ್ರದಾಯಿಕ ಇಂಧನ ಮೂಲಗಳಿಗಿಂತ ನವೀಕರಿಸಬಹುದಾದ ಇಂಧನ ಕಡಿಮೆ ಖರ್ಚಿನ ಪರ್ಯಾಯ ಇಂಧನ ಮೂಲವಾಗಿದೆ ಎಂದು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next