ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಮುಂದುವರಿದಿದೆ. ಈ ಪ್ರದೇಶದಲ್ಲಿ ಹಲವು ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಸೇನಾಪಡೆ ಹತ್ಯೆಗೈದಿದ್ದು. ಇದೀಗ ಎನ್‌ಕೌಂಟರ್‌ನಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದೀಗ ಕುಪ್ವಾರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ,
ಉತ್ತರ ಕಾಶ್ಮೀರದ ಕುಪ್ವಾರದ ಮಚಿಲ್ ಸೆಕ್ಟರ್‌ನಲ್ಲಿರುವ ಕಮ್ಕಾರಿಯಲ್ಲಿನ ಸೇನಾ ಪೋಸ್ಟ್‌ನಲ್ಲಿ ಶಂಕಿತ ಉಗ್ರರೊಂದಿಗೆ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಸೇನೆಯ ಪ್ರಕಾರ, ಈ ಗುಂಡಿನ ದಾಳಿಯಲ್ಲಿ ಒಬ್ಬ ಪಾಕಿಸ್ತಾನಿ ಕೂಡ ಕೊಲ್ಲಲ್ಪಟ್ಟಿದ್ದಾನೆ ಎಂದು ಹೇಳಲಾಗಿದ್ದು, ಗಾಯಗೊಂಡ ಸೈನಿಕರನ್ನು ಕುಪ್ವಾರದಿಂದ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ.
ಕುಪ್ವಾರದಲ್ಲಿ ಉಗ್ರರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಈಗಾಗಲೇ ಮಾಹಿತಿ ಲಭಿಸಿತ್ತು. ಕಳೆದ ಹಲವು ದಿನಗಳಿಂದ ಇಲ್ಲಿ ಸೇನೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದೆ. ಇದು ಪಾಕಿಸ್ತಾನ ನಡೆಸಿದ ಬಿಎಟಿ ದಾಳಿ ಎಂದು ಹೇಳಲಾಗುತ್ತಿದೆ. ಬಿಎಟಿ (BAT) ಎಂದರೆ ಬಾರ್ಡರ್ ಆಕ್ಷನ್ ಟೀಮ್, ಇದರಲ್ಲಿ ಪಾಕಿಸ್ತಾನಿ ಆರ್ಮಿ ಕಮಾಂಡೋಗಳು ಮತ್ತು ಭಯೋತ್ಪಾದಕರು ಸೇರಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ಭಯೋತ್ಪಾದಕ ದಾಳಿಗಳು ನಡೆದಿವೆ.
ಇದನ್ನೂ ಓದಿ: Haveri; ಮಾದಾಪುರ ಗ್ರಾಮದಲ್ಲಿ ಮನೆ ಕುಸಿತ ಪ್ರಕರಣದಲ್ಲಿ ಮತ್ತೊಂದು ಮಹಿಳೆ ಸಾವು