Advertisement

ಕುಪ್ವಾರ: ಉಗ್ರರ ಗುಂಡಿಗೆ ಯೋಧ ಬಲಿ

06:00 AM Aug 18, 2018 | Team Udayavani |

ಶ್ರೀನಗರ: ಜಮ್ಮು- ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಇಲ್ಲಿನ ಕಚೂ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆ ಯೋಧರು ಶೋಧ ಕಾರ್ಯ ಆರಂಭಿಸಿದರು. ಅಷ್ಟರಲ್ಲಿ ಮನೆಯೊಂದರಲ್ಲಿ ಅವಿತಿದ್ದ ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಆರಂಭಿಸಿದರು. ಈ ವೇಳೆ ಯೋಧ ರಾಮ್‌ಬಾಬು ಸಹಾಯ್‌ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದರು ಎಂದು ಸೇನಾ ಮೂಲಗಳು ತಿಳಿಸಿವೆ.

Advertisement

ಗ್ರೆನೇಡ್‌ ದಾಳಿ: ನಾಲ್ವರಿಗೆ ಗಾಯ
ಇದೇ ವೇಳೆ ಇಲ್ಲಿನ ಅವಂತಿಪೋರಾದ ಪೊಲೀಸ್‌ ಕಟ್ಟಡವೊಂದನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್‌ ದಾಳಿ ನಡೆಸಿದ್ದು, ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ. ಗುರಿ ತಪ್ಪಿದ ಕಾರಣ, ಗ್ರೆನೇಡ್‌ ರಸ್ತೆಯಲ್ಲೇ ಸ್ಫೋಟಗೊಂಡಿದ್ದರಿಂದ ನಾಗರಿಕರಿಗೆ ಗಾಯಗಳಾಗಿವೆ. ಈ ಪೈಕಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಿಳೆಯ ಹತ್ಯೆಗೈದ ಉಗ್ರರು
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಹಿಜ್ಬುಲ್‌ ಮುಜಾಹಿದೀನ್‌ ಉಗ್ರರು ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಮೃತ ಮಹಿಳೆಯನ್ನು ಶಮೀಮಾ ಬಾನೋ ಎಂದು ಗುರುತಿಸಲಾಗಿದೆ. ಆದರೆ  ಈ ಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next