ಹೊಸದಿಲ್ಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಮೂವರು ಅಪರಾಧಿಗಳು ಶರಣಾಗಲು ಹೆಚ್ಚಿನ ಸಮಯ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಗುಜರಾತ್ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, 2002 ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮತ್ತು ಎರಡು ವಾರಗಳಲ್ಲಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲು ಸೂಚನೆಗಳನ್ನು ನೀಡಲಾಯಿತು.
ಭಾನುವಾರದಂದು ಸಮಯ ಮುಗಿಯುತ್ತಿರುವುದರಿಂದ ಮೂವರು ಅಪರಾಧಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಜೈಲು ಅಧಿಕಾರಿಗಳ ಮುಂದೆ ತಮ್ಮ ಶರಣಾಗತಿಯ ಗಡುವನ್ನು ನಾಲ್ಕರಿಂದ ಆರು ವಾರಗಳವರೆಗೆ ವಿಸ್ತರಿಸುವಂತೆ ಕೋರಿದ್ದಾರೆ.
ನ್ಯಾಯಮೂರ್ತಿ ಬಿ ವಿ ನಾಗರ್ತನ ನೇತೃತ್ವದ ಪೀಠದ ಮುಂದೆ ತುರ್ತು ಪ್ರಸ್ತಾಪದ ಸಂದರ್ಭದಲ್ಲಿ, ಶರಣಾಗತಿಯ ಸಮಯ ಭಾನುವಾರ ಕೊನೆಗೊಳ್ಳುತ್ತಿರುವುದರಿಂದ ಪ್ರಕರಣವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ವಕೀಲರು ಪೀಠಕ್ಕೆ ಮನವಿ ಮಾಡಿದರು. ನಂತರ ಪೀಠವು ಈ ಪ್ರಕರಣವನ್ನು ತುರ್ತು ವಿಚಾರಣೆಗಾಗಿ ಮುಖ್ಯ ನ್ಯಾಯಾಧೀಶರ ಮುಂದೆ ಇಡುವಂತೆ ನೋಂದಾವಣೆಗೆ ಸೂಚಿಸಿತು. ಶುಕ್ರವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಅಪರಾಧಿಗಳಲ್ಲಿ ಒಬ್ಬರಾದ ಗೋವಿಂದಭಾಯಿ ನೈ. ಅವರು ತಮ್ಮ ಮನವಿಯಲ್ಲಿ, ತಮ್ಮ 88 ವರ್ಷದ ತಂದೆ ಮತ್ತು 75 ವರ್ಷದ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ, ಅಲ್ಲದೆ ತಮ್ಮ ತಂದೆ ಅಸ್ತಮಾದಿಂದ ಬಳಲುತ್ತಿದ್ದು, ಇತ್ತೀಚೆಗಷ್ಟೇ ಆಂಜಿಯೋಗ್ರಫಿ ಸೇರಿದಂತೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಮೂಲವ್ಯಾಧಿ ಚಿಕಿತ್ಸೆಗಾಗಿ ಮತ್ತೊಂದು ಆಪರೇಷನ್ ಮಾಡಲು ನಿರ್ಧರಿಸಲಾಗಿದೆ ಹಾಗಾಗಿ ಹೆಚ್ಚಿನ ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ.
ಮತ್ತೋರ್ವ ಅಪರಾಧಿ ರಮೇಶ್ ರೂಪಾಭಾಯ್ ಚಂದನ ಅವರು ತಮ್ಮ ಮಗನ ಮದುವೆಗೆ ದಿನ ನಿಗದಿಯಾಗಿದ್ದು ಆದ ಕಾರಣ ಸಮಯಾವಕಾಶ ಬೇಕು ಎಂದು ವಿವರಿಸಿ ಆರು ವಾರಗಳ ಕಾಲ ವಿಸ್ತರಣೆಯನ್ನು ಮಾಡುವಂತೆ ಕೇಳಿಕೊಂಡಿದ್ದಾರೆ.
ಮೂರನೇ ಅಪರಾಧಿ ಮಿತೇಶ್ ಚಿಮನ್‌ಲಾಲ್ ಭಟ್ ಅವರು ಆರು ಕೃಷಿ ಕಾರ್ಯದಲ್ಲಿ ತೊಡಗಿದ್ದ ನಾನು ಉತ್ಪನ್ನಗಳು ಕೊಯ್ಲಿಗೆ ಬಂದಿದ್ದು ಅದರ ಇದರ ಕಾರ್ಯ ಪೂರ್ಣಗೊಂಡ ಬಳಿಕ ಶರಣಾಗತಿಗೆ ಸಿದ್ದನಿದ್ದೇನೆ ಹಾಗಾಗಿ ಸಮಯ ನೀಡುವಂತೆ ಕೇಳಿಕೊಂಡಿದ್ದಾರೆ.
ಇದನ್ನೂ ಓದಿ: Delhi Hotel: ಹಣ ನೀಡದೆ 15 ದಿನ ಐಷಾರಾಮಿ ಹೋಟೆಲ್ ನಲ್ಲಿ ತಂಗಿದ್ದ ಚಾಲಾಕಿ ಮಹಿಳೆ ಅರೆಸ್ಟ್