Advertisement

Arrested: ಭಾರತ-ಆಸ್ಟ್ರೇಲಿಯಾ ಟಿ 20 ಪಂದ್ಯದ ವೇಳೆ ಪಾಕ್‌ ಪರ ಘೋಷಣೆ; ಇಬ್ಬರ ಸೆರೆ

09:55 AM Dec 03, 2023 | Team Udayavani |

ಬೆಂಗಳೂರು: ಎರಡು ದಿನಗಳ ಹಿಂದೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರಪ್ಪನಪಾಳ್ಯ ನಿವಾಸಿಗಳಾದ ಇನಾಯತ್‌ ಉಲ್ಲಾ ಖಾನ್‌ ಹಾಗೂ ಸೈಯದ್‌ ಮುಬಾರಕ್‌ ಬಂಧಿತರು.

Advertisement

ಪಬ್‌ ವ್ಯವಸ್ಥಾಪಕ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ಜೆ.ಪಿ.ನಗರ 2ನೇ ಹಂತದಲ್ಲಿರುವ ಮೊಹಾಲಿಕಾ ಪಬ್‌ನಲ್ಲಿ ಭಾರತ- ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ-20 ಕ್ರಿಕೆಟ್‌ ಪಂದ್ಯ ವೀಕ್ಷಣೆಗಾಗಿ ಶುಕ್ರವಾರ ವ್ಯವಸ್ಥೆ ಮಾಡಲಾಗಿತ್ತು. ಆರೋಪಿಗಳು ಶುಕ್ರವಾರ ರಾತ್ರಿ ಪಬ್‌ಗ ಹೋಗಿದ್ದಾರೆ. ಪಂದ್ಯ ನಡೆಯುವಾಗ ಪಬ್‌ ನಲ್ಲಿ ಕೂಗಾಡಿದ್ದ ಆರೋಪಿಗಳು, ಪಾಕಿಸ್ತಾನ್‌ ಪರ ಘೋಷಣೆ ಕೂಗಿದ್ದರು. ಆರೋಪಿಗಳ ವರ್ತನೆಯನ್ನು ಪ್ರಶ್ನಿಸಿದ್ದ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ನಂತರ, ಪೊಲೀಸ್‌ ನಿಯಂತ್ರಣ ಕೊಠಡಿಗೆ ಕರೆ ಮಾಡಿ ದೂರು ನೀಡಲಾಗಿತ್ತು.

ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಬಳಿಕ ಪಬ್‌ನ ವ್ಯವಸ್ಥಾಪಕ ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next