Advertisement

ಘನ ತ್ಯಾಜ್ಯ ವಿಲೇವಾರಿಗೆ ಬಂತು ಸ್ವಚ್ಚತಾ ವಾಹಿನಿ

01:20 PM Mar 01, 2022 | Team Udayavani |

ಯಾದಗಿರಿ: ಜಿಲ್ಲಾ ಪಂಚಾಯತ್‌ ಆವರಣದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿಗಾಗಿ ಗ್ರಾಪಂಗಳಿಗೆ “ಸ್ವಚ್ಛತಾ ವಾಹಿನಿ’ ವಾಹನಗಳನ್ನು ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಹಸ್ತಾಂತರಿಸಿದರು.

Advertisement

ಜಿಲ್ಲೆಯ ಎಲ್ಲ 122 ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವತ್ಛತೆ ಕಾಪಾಡುವ ದೃಷ್ಟಿಯಿಂದ ಘನ ಮತ್ತು ದ್ರವ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲು “ಸ್ವಚ್ಛತಾ ವಾಹಿನಿ’ ಎಂಬ ಹೆಸರಿನಲ್ಲಿ 43 ವಾಹನಗಳನ್ನು ಸಾಂಕೇತಿಕವಾಗಿ ಹಸ್ತಾಂತರಿಸುವ ಮೂಲಕ ಸಚಿವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌., ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಮರೇಶ ಆರ್‌., ರಾಯಚೂರು ಸಂಸದ ಅಮರೇಶ್ವರ ನಾಯಕ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ್‌, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌, ಜಿಪಂ ಯೋಜನಾ ನಿರ್ದೇಶಕ ಬಿ.ಎಸ್‌. ರಾಠೊಡ್‌, ಮುಖ್ಯ ಯೋಜನಾಧಿಕಾರಿ ಗುರುನಾಥ ಗೌಡಪ್ಪನ್ನೋರ, ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಚಟ್ನಳ್ಳಿ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next