Advertisement

ಘನ ತ್ಯಾಜ್ಯ ನಿರ್ವಹಣೆ ತೃಪ್ತಿಕರ

02:43 PM May 04, 2019 | Suhan S |

ರಾಮನಗರ: ಘನ ತ್ಯಾಜ್ಯ ನಿರ್ವಹಣೆಯಲ್ಲಿ ರಾಮನಗರ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್‌ ಜಿ. ಆಡಿ ತೃಪ್ತಿ ವ್ಯಕ್ತಪಡಿಸಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅರೋಗ್ಯ ಇಲಾಖೆ, ನಗರ ಸಭೆ, ಪುರಸಭೆ, ಜಿಲ್ಲಾ ಪಂಚಾಯ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಪರಿಶೀಲನಾ ಸಭೆ ನಡೆಸಿದರು.

ಕಸ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳ ಪ್ರಾತ್ಯಕ್ಷಿಕೆ ವೀಕ್ಷಿಸಿ, ಮಾತನಾಡಿದ ಅವರು, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳು ಹಾಗೂ ಪರಿಸರ ಸಂರಕ್ಷಣಾ ಕಾನೂನುಗಳನ್ನು ಪರಿಣಾಮ ಕಾರಿಯಾಗಿ ಜಾರಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.

ಹಸಿ- ಒಣ ಕಸ ವಿಂಗಡಿಸದಿದ್ದರೆ ದಂಡ: ಸ್ಥಳೀಯ ಸಂಸ್ಥೆಗಳು ಕಸವನ್ನು ಒಣ ಹಾಗೂ ಹಸಿಕಸವನ್ನಾಗಿ ವಿಂಗಡಿಸಿ ನೀಡುವಂತೆ ವ್ಯಾಪಕ ಪ್ರಚಾರಮಾಡಿ ಹಸಿಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಕ್ರಮವಹಿಸಬೇಕು. ಸ್ವಯಂಸೇವಾ ಸಂಸ್ಥೆಗಳು ಹಾಗೂ ಸ್ಥಳೀಯ ಕೌನ್ಸಿಲರ್‌ಗಳು ಘನ ತ್ಯಾಜ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿ, ಪ್ರತಿ ಮನೆ ವಿಂಗಡಿತ ಕಸ ನೀಡುವಂತೆ ಮನವೊಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲೆಡೆಯೂ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಎದುರಾಗುತ್ತಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯುವವರು ಹಾಗೂ ಕಸವನ್ನು ಬೇರ್ಪಡಿಸದೇ ಕೊಡುವವರ ಮೇಲೆ ದಂಡ ವಿಧಿಸಬೇಕು. ಘನ ತ್ಯಾಜ್ಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಶಾಲಾ ಮಟ್ಟದಲ್ಲೇ ಕಾರ್ಯಕ್ರಮ ರೂಪಿಸಬೇಕು ಎಂದು ಶಿಕ್ಷಣ ಇಲಾಖೆಗೆ ಸೂಚನೆ ಕೊಟ್ಟರು. ಹೊಸ ಬಡಾವಣೆ ನಿರ್ಮಾಣವಾಗುವಾಗಲೇ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ತಿಳಿಸಿದರು.

Advertisement

ಪ್ಲಾಸ್ಟಿಕ್‌ ತಡೆಯಲು ವ್ಯಾಪಕ ದಾಳಿಗೆ ಆದೇಶ: ಪ್ಲಾಸ್ಟಿಕ್‌ ಬಳಕೆ ತಡೆಯಲು ವ್ಯಾಪಕ ದಾಳಿ ಅಗತ್ಯವಾಗಿದೆ. ಯಾವುದೇ ಅಂಗಡಿಗಳಲ್ಲಿ ಮರು ಬಳಕೆಯಾಗದ ಪ್ಲಾಸ್ಟಿಕ್‌ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ವಸಬೇಕು. ಆಸ್ಪತ್ರೆ ತ್ಯಾಜ್ಯವನ್ನು ಕಡ್ಡಾಯವಾಗಿ ಪ್ರತ್ಯೇಕವಾಗಿ ಪಡೆದು ನಿರ್ವಹಿಸಬೇಕಾಗಿದೆ. ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಮನೆ ಮನೆಗಳಲ್ಲೇ ಸಾಧ್ಯವಿದೆ. ಈ ವಿಚಾರದಲ್ಲಿಯೂ ಅಧಿಕಾರಿಗಳು ಸೂಕ್ತ ಕ್ರಮವಸಬೇಕಾಗಿದೆ. ಈ ನಿಟ್ಟಿನಲ್ಲಿ ನಾಗರಿಕರು ಹಾಗೂ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಮುಂದಾಗಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ. ರಾಜೇಂದ್ರ, ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಪಿ ಮುಲ್ಲೈ ಮುಹಿಲನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ. ರಮೇಶ್‌, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಗರಸಭೆ, ಪುರಸಭೆ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next