Advertisement

Arecanut ಬೆಳೆಗಾರರಿಗೆ ಪರಿಹಾರ: ಕರ್ನಾಟಕ, ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಮನವಿ

12:37 AM Sep 06, 2024 | Team Udayavani |

ಮಂಗಳೂರು:ಬೇಸಗೆಯಲ್ಲಿ ಬಿಸಿಲ ಬೇಗೆ ಹಾಗೂ ಮುಂಗಾರಿನಲ್ಲಿ ಮಳೆಯ ಆರ್ಭಟದಿಂದಾಗಿ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಅಡಿಕೆಯನ್ನು ಕಾಡಿದ ಕೊಳರೋಗ ರೈತರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದೆ.

Advertisement

ಹಾಗಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸಬೇಕು ಎಂದು ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ರೈತರನ್ನು ಈ ದಯನೀಯ ಸ್ಥಿತಿಯಿಂದ ಪಾರು ಮಾಡಲು, ರಾಜ್ಯದಲ್ಲಿ ಅಡಿಕೆ ಬೆಳೆ ನಾಶದ ಬಗ್ಗೆ ತುರ್ತು ಸಮೀಕ್ಷೆ ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕು ಹಾಗೂ ಅದರ ಪ್ರಕಾರ ಪರಿಹಾರ ಘೋಷಿಸಬೇಕು.

ಕ್ಯಾಂಪ್ಕೊ ಮತ್ತು ಇತರ ಸಹಕಾರ ಸಂಸ್ಥೆಗಳು ಸರ್ವ ಪ್ರಯತ್ನಗಳ ಮೂಲಕ ಕೆ.ಜಿ. ಗೆ 400 ರೂಪಾಯಿಗಳ ಆಸುಪಾಸಿನಲ್ಲಿ ಅಡಿಕೆಯ ದರವನ್ನು ಸ್ಥಿರೀಕರಿಸಿ ರೈತರ ಬೆಂಬಲಕ್ಕೆ ನಿಂತಿವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next