Advertisement
ಈ ವೃತ್ತಿಯಲ್ಲಿ ತೊಡಗಿರುವ ಜನರು ಆನ್‌ಲೈನ್‌ನಲ್ಲಿ ಸೇವಾಸಿಂಧು https://sevasindhu.karnataka.gov.in ಪೋರ್ಟ್‌ಲ್‌ನಲ್ಲಿ ಅರ್ಜಿ ಸಲ್ಲಿಸಿದಲ್ಲಿ, ಅವುಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಆಧಾರ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಪರಿಹಾರ ವರ್ಗಾಯಿಸಲಾಗುತ್ತದೆ. 18 ರಿಂದ 65 ವರ್ಷದೊಳಗಿನ ವ್ಯಕ್ತಿಗಳಿಗೆ, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ, ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ. ಅಗಸ ಹಾಗೂ ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ಧೃಢೀಕರಣ ಪತ್ರ, ನಿಗದಿತ ನಮೂನೆಯಲ್ಲಿ ಸ್ವಯಂ ಘೋಷಣೆ, ಬಿಪಿಎಲ್ ಕಾರ್ಡ್, ಆಧಾರ್‌ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜನ್ಮದಿನಾಂಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
ಹಲವು ವರ್ಗದವರಿಗೆ ಪರಿಹಾರ
12:27 PM Jun 25, 2020 | Suhan S |
Advertisement
Udayavani is now on Telegram. Click here to join our channel and stay updated with the latest news.