Advertisement

ಹೊಸ ಆವಿಷ್ಕಾರದಿಂದ ಕೃಷಿ ಸಮಸ್ಯೆಗೆ ಪರಿಹಾರ

02:47 PM Aug 17, 2021 | Team Udayavani |

ಬೆಂಗಳೂರು: ಹೊಸ ಆವಿಷ್ಕಾರಗಳ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಉಪರಾಷ್ಟ್ರ ಪತಿ ಎಂ.ವೆಂಕಯ್ಯ ನಾಯ್ಡು ಹೇಳಿದರು.

Advertisement

ಜಕ್ಕೂರು ಆವರಣದಲ್ಲಿರುವ ಜವಾಹರ್‌ಲಾಲ್‌ ನೆಹರು ಸೆಂಟರ್‌ ಅಡ್ವಾನ್ಸ್‌ ಸೈಂಟಿಫಿಟಿಕ್‌ ಸಂಶೋಧನಾ ಕೇಂದ್ರದ ನಾವೀನ್ಯತೆ ಮತ್ತು ಅಭಿವೃದ್ಧಿ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಈ ಸಂಸ್ಥೆ ವಿಜ್ಞಾನ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದೆ. ತಮ್ಮ ಅನುಪಮ ಸಾಧನೆಗಳಿಂದ ಜಗತ್ತಿನ ಗಮನ ಸೆಳೆದಿರುವುದು ಖುಷಿ ಪಡುವ ಸಂಗತಿ ಆಗಿದೆ. ವಿಜ್ಞಾನಿಗಳು ರೈತರಿಗೆ ವೈಜ್ಞಾನಿಕವಾಗಿ ತಮ್ಮ ಸಂಶೋಧನೆಗಳ ಮೂಲಕ ಸೇವೆ ಮಾಡಬೇಕಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಇದನ್ನೂ ಓದಿ:ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ: ಅ.24ರಂದು ಭಾರತ-ಪಾಕ್ ಮುಖಾಮುಖಿ

ಕನ್ನಡದಲ್ಲಿಯೇ ತಮ್ಮ ಮಾತು ಆರಂಭಿಸಿದ ವೆಂಕಯ್ಯ ನಾಯ್ಡು, ಈ ಕೇಂದ್ರದ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ವಿಭಿನ್ನ ವೈಜ್ಞಾನಿಕ ಸಂಶೋಧನೆಗಳ ಮೂಲಕ 300 ಪೇಟೆಂಟ್‌ಗಳನ್ನು ಸಂಸ್ಥೆ ತನ್ನದಾಗಿಸಿಕೊಂಡಿದೆ. ನೂತನ ಆವಿಷ್ಕಾರಗಳ ಮೂಲಕ ವಿಶ್ವದ ಗಮನ ಸೆಳೆದಿದೆ ಎಂದು ಹೇಳಿದರು.

Advertisement

ಬೆಂಗಳೂರಿನ ಕೆರೆಗಳ ಸಂರಕ್ಷಣೆ ಆಗಬೇಕು:ಸಿಲಿಕಾನ್‌ ಸಿಟಿ ಬೆಂಗಳೂರುಈ ಹಿಂದೆ ಕೆರೆಗಳು ಊರಾಗಿತ್ತು. ಆದರೆ ಈಗ ಒತ್ತುವರಿಯ ಹಿನ್ನೆಲೆಯಲ್ಲಿ ಹಲವು ಕೆರೆಗಳು ಮರೆಯಾಗಿವೆ. ಇದೀಗ ಈಗ ಉಳಿದ ಕೆರೆಗಳ ನ್ನಾದರೂ ಪುನಶ್ಚೇತನ ಮಾಡುವ ಮೂಲಕ ಸಂರಕ್ಷಣೆ ಮಾಡಬೇಕಿದೆ ಎಂದು ತಿಳಿಸಿದರು.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡೈನಾಮಿಕ್‌ ಆಗಿದ್ದು ಅವರು ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ಕೆರೆಗಳ ಸಂರಕ್ಷಣೆಗೆ ಸಕಾಲದಲ್ಲಿ ಉತ್ತಮ ನಿರ್ಧಾರ ವನ್ನು ಕೈಗೊಳ್ಳಲಿದ್ದಾರೆ. ಕ್ರಿಯಾತ್ಮಕ ವಾಗಿ ಒತ್ತುವರಿಯನ್ನು ತೆರವುಗೊಳಿಸಲಿದ್ದಾರೆ
ಎಂದು ವೆಂಕಯ್ಯ ನಾಯ್ಡು ಭರವಸೆ ವ್ಯಕ್ತಪಡಿಸಿದರು.

ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಪೇಟ ತೊಡಿಸಿ ಸ್ವಾಗತಿಸಿದ ಸಿಎಂ
ಆರು ದಿನಗಳ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಬಂದಳಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ಪೇಟ ತೊಡಿಸಿ,ಹಾರಹಾಕಿ ಸ್ವಾಗತಿಸಿದರು. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಂಸದ ಪಿ.ಸಿ.ಮೋಹನ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next