Advertisement

ಜನರ ಸಮಸ್ಯೆಗಳಿಗೆ ಮನೆಬಾಗಿಲಿಗೆ ಪರಿಹಾರ

02:34 PM Jun 22, 2022 | Team Udayavani |

ಯಡ್ರಾಮಿ: ತಾಲೂಕಿನ ಕಾಚಾಪೂರ ಗ್ರಾಪಂ ವ್ಯಾಪ್ತಿಯ ಐನಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ರಾಜ್ಯ ಸರ್ಕಾರದ ವಿನೂತನ ಕಾರ್ಯಕ್ರಮದಡಿ ತಹಶೀಲ್ದಾರ್‌ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.

Advertisement

ತಹಶೀಲ್ದಾರ್‌ ಶಾಂತಗೌಡ ಬಿರಾದಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಮಾತನಾಡಿದ ಅವರು, ತಾಲೂಕಾಡಳಿತ ಆಗಲಿ ಜಿಲ್ಲಾಡಳಿತವೇ ಆಗಲಿ ನೇರವಾಗಿ ಜನರ ಮನೆ ಬಾಗಿಲಿಗೆ ಬಂದು, ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಿ ಜನತೆಗೆ ಕಚೇರಿ ಅಲೆದಾಟ ತಪ್ಪಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮ ಇದಾಗಿದೆ. ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಭಾಗವಹಿಸುವುದರಿಂದ ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬಹುದಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದರು.

ಸಭೆಯಲ್ಲಿ ಗೈರು ಹಾಜರಾದ ಇಲಾಖೆಗಳ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮೇಲಧಿಕಾರಿಗಳ ಗಮನಕ್ಕೆ ತರುವ ಖಡಕ್‌ ಎಚ್ಚರಿಕೆ ನೀಡಿದರು.

ನಂತರ, ಮಕ್ಕಳ ಮತ್ತು ಮಹಿಳಾ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಗ್ರಾಮದ ಕೆಲ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಮದಲ್ಲಿನ ಕುಡಿಯುವ ನೀರು, ಸಿಸಿ ರಸ್ತೆ, ಒಳಚರಂಡಿ, ವಿದ್ಯುತ್‌ ಸಮಸ್ಯೆಗಳ ಕುರಿತು ಮುಖಂಡರು ಮನವಿ ಪತ್ರ ಸಲ್ಲಿಸಿದರು. ರೈತರು ತಮ್ಮ ಜಮೀನುಗಳಿಗೆ ತೆರಳಲು ಸುಸಜ್ಜಿತ ರಸ್ತೆ ನಿರ್ಮಾಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು. ಇದೇ ವೇಳೆ ಗ್ರಾಮಸ್ಥರು ಗ್ರಾಮದ ಸಮಸ್ಯೆಗಳ ಆಲಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಿಡಿಒ, ತಾಲೂಕು ರೈತ ಸಂಪರ್ಕ ಕೇಂದ್ರ, ಪಶು ವೈದ್ಯರು, ತಾಪಂ ಸಿಬ್ಬಂದಿ, ಸಣ್ಣ ನೀರಾವರಿ ಇಲಾಖೆ ಅಭಿಯಂತರು, ಶಿಕ್ಷಣ ಇಲಾಖೆಯ ಸಿಆರ್‌ಪಿ, ಅಬಧಿಕಾರಿ ನಿರೀಕ್ಷಕ, ಬಿಸಿಎಂ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next