ಸಂತೆಮರಹಳ್ಳಿ: ರೈತರ ಸಮಸ್ಯೆಗಳನ್ನು ಜಿಲ್ಲಾ ಡಳಿತ, ಸಂಬಂಧಪಟ್ಟ ಇಲಾಖೆ ಗಳು ಆ.15 ರೊಳಗೆ ಬಗೆಹರಿಸದಿದ್ದರೆ ಜಿಲ್ಲಾ ಹಾಗೂ ತಾಲೂಕು ಆಡಳಿತದಿಂದ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡ ಲು ಅವಕಾಶ ನೀಡುವುದಿಲ್ಲ ಎಂದು ರೈತ ಸಂಘದ ಜಿಲ್ಲಾ ಧ್ಯಕ್ಷ ಹೊನ್ನೂರು ಪ್ರಕಾಶ್ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಕಬಿನಿ ಜಲಾಶಯ ತುಂಬಿದೆ. ಆದರೆ ರೈತರಿಗೆ ಕಬಿನಿ ನಾಲೆಗಳಿಗೆ ನೀರು ಹರಿ ಸಲು ಇಲಾಖೆ ಅಧಿಕಾರಿಗಳು ಹಿಂದೇ ಟು ಹಾಕುತ್ತಿದ್ದಾರೆ ಎಂದು ದೂರಿದರು.
ನೀರು ಹರಿಸಲು ಒತ್ತಾಯ: ಕೇವಲ ಜಾನುವಾ ರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರು ಬಿಡಲಾಗುವುದು. ರೈತರ ಬೆಳೆಗಳಿಗೆ ನೀರು ಹರಿಸು ವುದಿಲ್ಲ ಎಂದು ನೋಟಿಸ್ ನೀಡಲಾಗಿದೆ. ಹಾಗಾಗಿ ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ ಭಾಗದ ರೈತರ ಬೆಳೆಗಳಿಗೆ ಸಂಪೂರ್ಣವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ಕಾಮಗಾರಿಗೆ ಚಾಲನೆ ನೀಡಿ: ಆ.15 ರೊಳಗೆ ಕೆರೆಗಳಿಗೆ ಗುಂಡ್ಲುಪೇಟೆಯ ವಡ್ಡಗೆರೆ ಸೇರಿದಂತೆ ಎಲ್ಲಾ ಕೆರೆಗಳಿಗೂ ನೀರು ತುಂಬಿಸಬೇಕು. ಹನೂರು ತಾಲೂಕಿನ ಹುಬ್ಬೆಹುಣಸೆ, ರಾಮಗುಡ್ಡ, ಗುಂಡಾಲ್ ಜಲಾಶಯಗಳ ಅಭಿವೃದ್ಧಿಗೆ 125 ಕೋಟಿ ರೂ. ಬಿಡುಗಡೆಯಾಗಿದ್ದು ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದರು.
ತಾಲೂಕುಗಳಲ್ಲಿ ಗೋಶಾಲೆ ತೆರೆಯಿರಿ: ಪ್ರತಿ ತಾಲೂಕು ಕೇಂದ್ರದಲ್ಲೂ ಗೋಶಾಲೆಗಳನ್ನು ತೆರೆಯಬೇಕು. ರೈತರಿಗೆ ಸೂಕ್ತ ಕಾಲದಲ್ಲಿ ದ್ವಿದಳ ಧಾನ್ಯ, ರಾಗಿ, ಜೋಳ, ಮುಸುಕಿನ ಜೋಳ, ಸಿರಿ ಧಾನ್ಯ ಸೇರಿದಂತೆ ಬಿತ್ತನೆ ಬೀಜಗಳನ್ನು ವಿತರಿಸಲು ಕೃಷಿ ಇಲಾಖೆ ಕ್ರಮ ವಹಿಸಬೇಕು. ಬೆಳೆವಿಮೆ ಹಣವನ್ನು ರೈತರ ಖಾತೆಗಳಿಗೆ ಬೇಗ ಜಮೆ ಮಾಡಬೇಕು. ಕಬ್ಬು ಅರೆಯುವ ಬಣ್ಣಾರಿ ಅಮ್ಮನ್ ಕಾರ್ಖಾನೆ ಮುಚ್ಚಿದ್ದು ಆದಷ್ಟು ಬೇಗ ಇದನ್ನು ತೆರೆಯಬೇಕು. ಕಬ್ಬಿಗೆ ವೈಜ್ಞಾನಿಕ ಬೆಲೆಗಳನ್ನು ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ರೈತರ ಫಸಲು ನಷ್ಟವಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರವನ್ನು ಅರಣ್ಯ ಇಲಾಖೆ ಕಟ್ಟಿ ಕೊಡಬೇಕು. ಕಾಡು ಪ್ರಾಣಿಗಳು ನಾಡಿಗೆ ಬಾರದಂತೆ ಸೂಕ್ತ ವ್ಯವಸ್ಥೆ ಮಾಡಿಕೊ ಳ್ಳಬೇಕು. ಇವೆಲ್ಲವನ್ನು ನಿಗದಿತ ಅವಧಿ ಯೊಳಗೆ ಅನುಷ್ಠಾನ ಮಾಡದಿದ್ದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಧ್ವಜಾರೋಹಣಕ್ಕೆ ಅವಕಾಶ ನೀಡುವು ದಿಲ್ಲ. ಅದರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಾಲೂಕು ಅಧ್ಯಕ್ಷ ಸಿದ್ದಲಿಂಗಸ್ವಾಮಿ, ಅಂಬಳೆ ಶಿವಕುಮಾರ್, ಅಂಬಳೆ ಶಿವಪ್ರಸಾದ್, ಪುಟ್ಟ ಮಾದಪ್ಪ, ನಾಗರಾಜು ಇತರರು ಇದ್ದರು.