Advertisement

ಕುಡಿವ ನೀರಿನ ಸಮಸ್ಯೆ ಪರಿಹರಿಸಿ

05:10 PM Dec 01, 2020 | Suhan S |

ಶಿವಮೊಗ್ಗ: ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವ ಕುರಿತಂತೆ ಪಾಲಿಕೆ ಮೇಯರ್‌ ಸುವರ್ಣ ಶಂಕರ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯರು ಪಕ್ಷಬೇಧ ಮರೆತು ಆಗ್ರಹಿಸಿದರು.

Advertisement

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯವೈಖರಿ ಬಗ್ಗೆ ಪಾಲಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಒಂದು ವಾರದೊಳಗೆ ನೀರಿನಸಮಸ್ಯೆ ಸರಿಪಡಿಸಬೇಕು. ಇಲ್ಲದಿದ್ದರೆ ಇಲಾಖೆಯಾದರೂ ಏಕೆ ಬೇಕು ಎಂದು ಪ್ರಶ್ನಿಸಿದರು.

ಉಪಮೇಯರ್‌ ಸುರೇಖಾ ಮುರಳಿಧರ್‌ ನೀರು ಸರಬರಾಜು ಮತ್ತು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿ, ಅನುದಾನ ಸೌಲಭ್ಯ ಸಮರ್ಪಕವಾಗಿಕಲ್ಪಿಸಿದ್ದರೂ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ಪಾಲಿಕೆ ಆಡಳಿತಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಚ್‌.ಸಿ. ಯೋಗೀಶ್‌ ಮಾತನಾಡಿ, ಹಬ್ಬದ ಸಂದರ್ಭದಲ್ಲೇ ಸಮರ್ಪಕವಾಗಿ ನೀರುಪೂರೈಕೆ ಮಾಡಿಲ್ಲ. ಬೇಜವಾಬ್ದಾರಿಯಿಂದ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಸದಸ್ಯರಾದ ನಾಗರಾಜ್‌ ಕಂಕಾರಿ, ಆರ್‌.ಸಿ. ನಾಯ್ಕ, ಯಮುನಾ ರಂಗೇಗೌಡ, ಇ.ವಿಶ್ವಾಸ್‌ ಮೊದಲಾದವರು ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಡಳಿತ ಪಕ್ಷದ ನಾಯಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಅಧಿಕಾರಿಗಳುಜವಾಬ್ದಾರಿಯಿಂದ ಕೆಲಸ ಮಾಡಬೇಕು. ನೀರು, ವಿದ್ಯುತ್‌ ಪೂರೈಕೆಯಲ್ಲಿವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು. ಒಂದು ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಸೂಚಿಸಿದರು. ಸುರೇಖಾ ಮುರಳೀಧರ್‌ ಒಂದು ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಹೊರಟು ಹೋಗಿ ಎಂದರು.

Advertisement

ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದ ಮೇಯರ್‌ ಸುವರ್ಣ ಶಂಕರ್‌, ಡಿ.10 ರಂದು ನೀರಿನ ಸಮಸ್ಯೆ ಕುರಿತಾಗಿವಿಶೇಷ ಸಭೆ ಕರೆಯುವುದಾಗಿ ತಿಳಿಸಿದರು. ವಿಧಾನ ಪರಿಷತ್‌ ಸದಸ್ಯ ಆರ್‌ .ಪ್ರಸನ್ನಕುಮಾರ್‌ ಮಾತನಾಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ಹೆಸರಲ್ಲಿ ನಗರವನ್ನು ಹಾಳು ಮಾಡಲಾಗುತ್ತಿದೆ. ಪಾಲಿಕೆ ಆಡಳಿತ ಬಿಗಿಯಿಲ್ಲದ ಕಾರಣ ಕಾಮಗಾರಿಗಳು ಕಳಪೆಯಾಗಿ ಸರ್ಕಾರದ ಹಣ ಪೋಲಾಗುತ್ತಿದೆ ಎಂದು ದೂರಿದರು.

ಈ ವೇಳೆ ಆಡಳಿತ ಪಕ್ಷದ ನಾಯಕ ಎಸ್‌. ಎನ್‌.ಚನ್ನಬಸಪ್ಪ, ಬಿಜೆಪಿ ಆಡಳಿತದಲ್ಲಿಶಿವಮೊಗ್ಗದ ಚಿತ್ರಣ ಬದಲಿಸಲಾಗುತ್ತಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ಗುಣಮಟ್ಟದ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು. ಕಸವನ್ನು ತುಂಗಾನಾಲೆಗೆ ಹಾಕಲಾಗುತ್ತಿದೆ ಎಂದು ಆರ್‌ .ಪ್ರಸನ್ನಕುಮಾರ್‌ ಹೇಳಿದ್ದು, ಕಸ ತೆಗೆಸದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ನೀರು ಪೂರೈಕೆ, ವಿದ್ಯುತ್‌, ಸ್ಮಾರ್ಟ್‌ಸಿಟಿ ಕಾಮಗಾರಿ ಕುರಿತಾಗಿ ವ್ಯಾಪಕ ಚರ್ಚೆ ನಡೆದು ಮಧ್ಯಾಹ್ನದ ನಂತರವೂ ಸಭೆ ಮುಂದುವರಿದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next