Advertisement
ನಗರದ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿಗಾಗಿ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಓವರ್‌ಹೆಡ್ ಟ್ಯಾಂಕ್‌ಗಳ ಮೂಲಕ ನೀರು ಪೂರೈಕೆಗೆ ಒತ್ತು ಕೊಡಬೇಕು. ನರೇಗಾ ಯೋಜನೆಯಡಿ ಸಂಪ್, ನೀರಿನ ತೊಟ್ಟಿಗಳನ್ನು ನಿರ್ಮಿಸಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು. ಒಟ್ಟಾರೆ ಜಿಲ್ಲಾದ್ಯಂತ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದರು.
Related Articles
Advertisement
ಕಾಮಗಾರಿ ಪ್ರಗತಿ ಆಗಿಲ್ಲ: ನರೇಗಾ ಯೋಜನೆಯಡಿ ಪಿಆರ್‌ಇಡಿ ವಿಭಾಗದಿಂದ ಕೈಗೊಂಡ ಕಾಮಗಾರಿಗಳು ಪ್ರಗತಿಯಾಗಿಲ್ಲ. ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಶೀಘ್ರ ಮುಗಿಸುವುದರ ಜೊತೆಗೆ ಉಳಿದ ಇತರೆ ಎಲ್ಲಇಲಾಖೆಗಳ ಪ್ರಗತಿ ಕಾರ್ಯಗಳು ನೂರಕ್ಕೆ ನೂರರಷ್ಟು ಅನುಷ್ಠಾನಗೊಳ್ಳಬೇಕು. ಅಧಿಕಾರಿಗಳು ಕಾರ್ಯವ್ಯಾಪ್ತಿಯ ಬಗ್ಗೆ ಕನಿಷ್ಟ ಜ್ಞಾನ ಹೊಂದಿರಬೇಕು. ಕೆಡಿಪಿಸಭೆಗೆ ಸಮರ್ಪಕ ಮಾಹಿತಿ ಒದಗಿಸಬೇಕು ಎಂದು ನಿರ್ದೇಶಿಸಿದರು.
ಜಿಪಂ ಸಿಇಒ ವಿದ್ಯಾಕುಮಾರಿ ಮಾತನಾಡಿ, ಸಚಿವರು ನೀಡಿರುವ ಎಲ್ಲಾ ನಿರ್ದೇಶನಗಳನ್ನು ಪಾಲಿಸಬೇಕು. ಕೆಡಿಪಿ ಸಭೆಗೆ ಸಚಿವರ ನಿರ್ದೇಶನದಂತೆ ಸಮರ್ಪಕಮಾಹಿತಿ ಒದಗಿಸಬೇಕು ಎಂದರು. ಜಿಲ್ಲಾ ಪಂಚಾಯಿತಿಉಪ ಕಾರ್ಯದರ್ಶಿ ಟಿ.ಕೆ. ರಮೇಶ್ ಸೇರಿದಂತೆ ಮತ್ತಿತರ ಇಲಾಖಾವಾರು ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಅಭಿವೃದ್ಧಿ ಕಾಮಗಾರಿಗೆ ಒತ್ತು :
ಚಿಕ್ಕನಾಯಕನಹಳ್ಳಿ ಸೇರಿದಂತೆ ಜಿಲ್ಲೆಯ ಯಾವ ತಾಲೂಕಿನಲ್ಲಿಯೂ ಗ್ರಾಮ ವಿಕಾಸ ಯೋಜನೆ ಪ್ರಗತಿ ಕಂಡಿಲ್ಲ. ಹಾಗಾಗಿ ಯೋಜನೆಗೆ ಮೀಸಲಾಗಿರುವ ಪೂರ್ಣ ಪ್ರಮಾಣದ ಅನುದಾನ ಬಳಸಿ ಶೇ.100ರಷ್ಟು ಗುರಿ ಸಾಧಿಸಬೇಕು. ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳು ತಾಲೂಕುವಾರು ಜಿಲ್ಲಾಭಿವೃದ್ಧಿಗೆಪೂರಕವಾದ ಮ್ಯಾಪಿಂಗ್ ರೂಪು-ರೇಷೆ ತಯಾರಿಸಬೇಕು. ಇದರಿಂದ ಆದ್ಯತೆ ಮೇರೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಒತ್ತು ಕೊಡಲು ಸುಲಭ ಸಾಧ್ಯವಾಗುತ್ತದೆ. ಮುಂದಿನ ಕೆಡಿಪಿ ಸಭೆಯೊಳಗೆ ಮ್ಯಾಪಿಂಗ್ ತಯಾರಿಸುವಂತೆಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.
ಫಲಾನುಭವಿಗಳಿಗೆ ನೋಟಿಸ್ ನೀಡಿ :
ಗ್ರಾಮೀಣ ವಸತಿ ಯೋಜನೆಗಳಡಿ 2010-11ನೇ ಸಾಲಿನಿಂದ ಬಾಕಿ ಉಳಿದಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. 2011-15ನೇ ಸಾಲಿನಲ್ಲಿ ವಸತಿ ಸೌಲಭ್ಯಕ್ಕೆ ಆಯ್ಕೆಯಾದ ಫಲಾನುಭವಿಗಳ ಪೈಕಿ ಈವರೆಗೂ ವಸತಿಯನ್ನು ನಿರ್ಮಿಸಿಕೊಳ್ಳದವರ ಫಲಾನುಭವಿಗಳಿಗೆ ನೋಟಿಸ್ ನೀಡಬೇಕು. ಅಲ್ಲದೆ, ಪೂರ್ಣವಾಗಿ ವಸತಿ ನಿರ್ಮಾಣ ಪ್ರಕ್ರಿಯೆ ಆರಂಭಿಸದ ಫಲಾನುಭವಿಗಳ ಮಂಜೂರಾತಿಯನ್ನು ರದ್ದುಗೊಳಿಸಿ ಪ್ರಸಕ್ತ ಸಾಲಿನ ಆಯ್ಕೆಯಲ್ಲಿ ಆದ್ಯತೆ ಕೊಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ. ಎಸ್.ಪಾಟೀಲ ಸೂಚಿಸಿದರು.