Advertisement

ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಸಮಸ್ಯೆ ನಿವಾರಣೆ: ಕಾರಜೋಳ

09:20 PM Sep 29, 2022 | Team Udayavani |

ಬೆಂಗಳೂರು: ವ್ಯಾಪಕ ಮಳೆ ಮತ್ತು ಜಲಾಶಯಗಳಿಂದ ಕೆರೆಗಳಿಗೆ ನೀರು ತುಂಬಿಸಿದ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವ ಪರಿಸ್ಥಿತಿ ಎದುರಾಗಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಳೆಯಿಂದಾಗಿ  ಶುದ್ಧ ಕುಡಿಯುವ ನೀರು ಲಭ್ಯವಾಗುತ್ತಿರುವುದರಿಂದ ರಾಜ್ಯದ ಕೆಲವೆಡೆ ಇದ್ದ ಫ್ಲೊರೈಡ್‌ ಸಮಸ್ಯೆಯೂ ನಿವಾರಣೆಯಾಗಿ ಆ ಭಾಗಗಳು ಫ್ಲೊರೈಡ್‌ ಮುಕ್ತವಾಗಿವೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳಿಂದ ಬಿದ್ದ ವ್ಯಾಪಕ ಮಳೆಯಿಂದಾಗಿ ಜಲಾಶಯ ಮತ್ತು ಕೆರೆಗಳು ಭರ್ತಿಯಾಗಿದೆ. ಇದರಿಂದಾಗಿ ಅಂತರ್ಜಲ ಮಟ್ಟ ಶೇ. 48 ರಿಂದ 50 ಹೆಚ್ಚಿದೆ. ನದಿ ಪಾತ್ರದಿಂದ ಎಲ್ಲ 17 ಸಾವಿರ ಕೆರೆಗಳನ್ನು ಭರ್ತಿ ಮಾಡುವ ಕೆಲಸ ಆರಂಭವಾಗಿದೆ ಎಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆ ಹೊರತುಪಡಿಸಿ ಬೃಹತ್‌ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಈ ಪ್ರಮಾಣದ ಕೆರೆಗಳಿದ್ದು, ಈ ಪೈಕಿ 1298 ಕೆರೆಗಳು ಭರ್ತಿಯಾಗಿವೆ. 3204 ಕೆರೆಗಳನ್ನು ಭರ್ತಿ ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ 11 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಕೆರೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡಲಾಗುತ್ತಿದೆ ಎಂದರು.

ರಾಜ್ಯದ ವಿವಿಧ ಜಲಾನಯನ ಪಾತ್ರದಲ್ಲಿ 12 ಲಕ್ಷ ಹೆಕ್ಟೇರ್‌ ನಷ್ಟು ಭೂಮಿಗೆ ನೀರು ಹರಿಸಬೇಕಾಗಿದೆ. ಮುಂದಿನ ಹತ್ತು ವರ್ಷಗಳಲ್ಲಿ ಸಂಪೂರ್ಣವಾಗಿ ನೀರಾವರಿ ಸೌಲಭ್ಯ ಒದಗಿಸುವ ಕೆಲಸವಾಗಲಿದೆ. ಇತ್ತೀಚೆಗೆ ಬಿದ್ದ ಮಳೆಯಿಂದ ಹಾನಿಗೀಡಾದ ಕೆರೆಗಳ ದುರಸ್ತಿಗೆ ಕಾವೇರಿ ನೀರಾವರಿ ನಿಗಮದ ಮೂಲಕ 50  ಕೋಟಿ ರೂ. ನೀಡಲಾಗಿದೆ  ಎಂದು ತಿಳಿಸಿದರು.

Advertisement

ಕಾವೇರಿ ನದಿ ಪಾತ್ರದಿಂದ ಈ ಬಾರಿ 273 ಟಿಎಂಸಿ ನೀರು ಸಮುದ್ರಕ್ಕೆ ಹರಿದು ಹೋಗಿದೆ. ನ್ಯಾಯಾಧಿಕರಣದ ತೀರ್ಪಿನ ಪ್ರಕಾರ ನಾವು ತಮಿಳುನಾಡಿಗೆ 177 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ಕಳೆದ ಜೂನ್‌ ಒಂದರಿಂದ ನಿನ್ನೆಯವರೆಗೆ 450.53  ಟಿಎಂಸಿಯಷ್ಟು ನೀರು ಹರಿದು ಹೋಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next