Advertisement

BJPಯಲ್ಲಿ ಕಡೆಗಣನೆ? ಕಾಂಗ್ರೆಸ್ ಸೇರ್ಪಡೆ ಸುದ್ದಿ ಸುಳ್ಳಲ್ಲ; ಸೋಮಣ್ಣ

04:00 PM Jan 19, 2017 | Team Udayavani |

ಬೆಂಗಳೂರು:ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಷಯ ಸುಳ್ಳು ಎಂದು ನಾನು ಹೇಳಲ್ಲ. ಮಾಧ್ಯಮಗಳಲ್ಲಿ (ಜ.18ರಂದು ಉದಯವಾಣಿ ಸೋಮಣ್ಣಗೆ ಕಾಂಗ್ರೆಸ್ ಗಾಳ ಎಂದು ವರದಿ ಪ್ರಕಟಿಸಿತ್ತು) ವರದಿ ನೋಡಿದ್ದೇನೆ ಎಂದು ಬಿಜೆಪಿ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದಾರೆ.

Advertisement

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರನ್ನು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆಂಬ ವರದಿ ಕುರಿತು ಕೇಳಿದ ಪ್ರಶ್ನೆಗೆ, ಹೌದು ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂಬ ವರದಿ ಸುಳ್ಳು ಎಂದು ಹೇಳಲ್ಲ ಎಂದು ಸ್ಪಷ್ಟಪಡಿಸಿದರು.

ಆದರೆ ಬಿಜೆಪಿಯಲ್ಲಿ ನಿಮ್ಮನ್ನು ಕಡೆಗಣಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಲು ಸೋಮಣ್ಣ ನಿರಾಕರಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next