Advertisement
ಸಂಸದ ಪ್ರತಾಪ್ ಸಿಂಹ ಮಾತನಾಡಿ, ಸಿದ್ದರಾಮಯ್ಯ ಪಾಳಯದಲ್ಲಿ ಹತಾಶೆ ಮತ್ತು ಸೋಲಿನ ಭಯ ಶುರುವಾಗಿದೆ. ನಾವು ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ.ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆ ಗೊತ್ತಾಗುತ್ತಿಲ್ಲ.ನಿನ್ನೆ ನಮ್ಮ ಪ್ರಚಾರ ಮೆರವಣಿಗೆ ಮೇಲೆ ಕಲ್ಲಲ್ಲಿ ಹೊಡೆದಿದ್ದಾರೆ. ಬಕೆಟ್ ಗಳಲ್ಲಿ ಕಲ್ಲು ಇಟ್ಟು ಕೊಂಡಿದ್ದರು. ಗಲಾಟೆ ಮಾಡಲು ಎಲ್ಲಾ ಸಿದ್ಧತೆ ಮಾಡಿ ಕೊಂಡಿದ್ದರು.ಸೋಲಿನ ಭಯದಿಂದ ಈ ರೀತಿ ಸಿದ್ದರಾಮಯ್ಯ ಟೀಂ ಮಾಡುತ್ತಿದೆ. ಸಿದ್ದರಾಮನ ಹುಂಡಿಯೇನೂ ಸಿದ್ದರಾಮಯ್ಯನ ಸಂಸ್ಥಾನನಾ?ಸಿದ್ದರಾಮಯ್ಯ ಏನೂ ಪಾಳೆಗಾರಿಕೆ ಮಾಡುತ್ತಿದ್ದಾರಾ? ಅವರು ತಮ್ಮ ಸ್ವಜಾತಿಗೆ ಚಿತಾವಣೆ ಕೊಟ್ಟು ಈ ರೀತಿ ತೊಂದರೆ ಕೊಡಿಸುತ್ತಿದ್ದಾರೆ. ಅವರೊಬ್ಬ ಜಾತಿವಾದಿ. ಅವರಿಗೆ ಸ್ವಜಾತಿ ಮಾತ್ರ ಮುಖ್ಯ ಅನ್ನೋದು ವರುಣಾ ಜನರಿಗೆ ಗೊತ್ತಿದೆ ಎಂದು ಕಿಡಿ ಕಾರಿದರು.
ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೆ ಈ ಗಲಾಟೆ ನಡೆಯಿತು.ಹತಾಶೆ ಮನೋಭಾವ ದಿಂದ ಸೋಲಿನ ಭಯದಿಂದ ಈ ಕೆಲಸ ಮಾಡಿದ್ದಾರೆ. ನಾನು ಎಲ್ಲಿ ಹೋಗ್ತಿನೋ ಅಲ್ಲಿಗೆ ಕೆಲವರು ಬರುತ್ತಾರೆ.ಎಲ್ಲಾ ಕೋಮಿನ ಜನ ಪ್ರೀತಿ ಮಾಡುತ್ತಾರೆ. ಒಂದು ಕೋಮಿನ ಜನ ಮಾತ್ರ ದ್ವೇಷ ಮಾಡುತ್ತಾರೆ.ನಮ್ಮ ಕಾರ್ಯಕರ್ತನಿಗೆ ಆದ ನೋವು ಸಿದ್ದರಾಮಯ್ಯ ರ ಅಣ್ಣನ ಮಗನಿಗೆ ಆಗಿದ್ದರೆ ನನ್ನನ್ನು ಯಾವ ದೃಷ್ಟಿಯಲ್ಲಿ ಸಿದ್ದರಾಮಯ್ಯ ನೋಡ್ತಿದ್ದರು? ಇದು ಸಿದ್ದರಾಮಯ್ಯ ಘನತೆಗೆ ಒಳ್ಳೆಯದಲ್ಲ.ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ನಾನು ಯಾವತ್ತಿಗೂ ವಿಚಲಿತ ಆಗಲ್ಲ.ವರುಣ ಕ್ಷೇತ್ರದ ಸ್ಥಿತಿ ಬಗ್ಗೆ ಚುನಾವಣಾ ಆಯುಕ್ತರಿಗೆ ಪತ್ರ ಬರೆಯುತ್ತೇನೆ.ನಿನ್ನೆಯ ಘಟನೆ ವಿಚಾರದಲ್ಲಿ ಪೊಲೀಸರು ಕೂಡ ಕುತಂತ್ರ ಮಾಡಿದರು ಎಂದು ಆಕ್ರೋಶ ಹೊರ ಹಾಕಿದರು.
Related Articles
ಕಾಪು ಸಿದ್ದಲಿಂಗಸ್ವಾಮಿ ಮಾತನಾಡಿ, ನಾನು ಯಾವತ್ತಿಗೂ ಬಿಜೆಪಿ ಬಿಡಲ್ಲ. ಬಿಜೆಪಿಗೆ ದ್ರೋಹ ಮಾಡುವ ಕೆಲಸ ಮಾಡಲ್ಲ.ಸಾಯುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಕಾಂಗ್ರೆಸ್ ನವರು ಸೋಲಿನ ಹತಾಶೆಯಿಂದ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಕತ್ತು ಸೀಳಿದರು ನಾನು ಬಿಜೆಪಿ ಬಿಡಲ್ಲ. ಯಡಿಯೂರಪ್ಪ ನನ್ನ ಬಳಿ ಸೋಮಣ್ಣ ಗೆಲ್ಲಿಸುವಂತೆ ಪ್ರಮಾಣ ಮಾಡಿಸಿಕೊಂಡಿದ್ದಾರೆ. ಶಿವಮೊಗ್ಗದ ಅವರ ದೇವರ ಮನೆಯಲ್ಲಿ ನಾನು ಪ್ರಮಾಣ ಮಾಡಿದ್ದೇನೆ. ವಿ ಸೋಮಣ್ಣ ಈ ಬಾರಿ ಗೆದ್ದೇ ಗೆಲ್ಲುತ್ತಾರೆ. ನಾನು ಕೊನೆಯವರೆಗೂ ಸೋಮಣ್ಣ ಜತೆ ಇರುತ್ತೇನೆ ಎಂದರು.
Advertisement