Advertisement

ಬಿಡಿಎ ಅಧ್ಯಕ್ಷರಾಗಿ ಸೋಮಶೇಖರ್‌ ಅಧಿಕಾರ ಸ್ವೀಕಾರ

06:40 AM Jan 11, 2019 | Team Udayavani |

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ಗುರುವಾರ ಅಧಿಕಾರ ಸ್ವೀಕರಿಸಿದರು. ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ಸೋಮಶೇಖರ್‌ಗೆ ಹೂಗುತ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

Advertisement

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್‌, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬಿಡಿಎ ಸದಸ್ಯನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಇದರೊಂದಿಗೆ ಬಿಡಿಎ ಆಡಳಿತ ವೈಖರಿ ಬಿಡಿಎ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿಯಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಬಿಡಿಎ ವತಿಯಿಂದ ಹಲವಾರು ಬಡಾವಣೆಗಳನ್ನು ನಿರ್ಮಿಸಲಾಗಿದೆ. ಆ ಪೈಕಿ ಕೆಲವು ಬಡಾವಣೆಗಳಲ್ಲಿ ಸಮಸ್ಯೆಗಳಿವೆ. ಅವುಗಳ ಕುರಿತು ಸಂಪೂರ್ಣ ಮಾಹಿತಿಯಿದ್ದು, ಅವುಗಳನ್ನು ಪರಿಹರಿಸಿ ಗ್ರಾಹಕರಿಗೆ ಹಂಚಿಕೆ ಮಾಡಲಾಗುವುದು. ಇದರೊಂದಿಗೆ ಬಿಡಿಎ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಉಕ್ಕಿನ ಸೇತುವೆ ಕುರಿತು ಚರ್ಚೆ: ತೀವ್ರ ವಿರೋಧಕ್ಕೆ ಕಾರಣವಾಗಿರುವ ಉಕ್ಕಿನ ಸೇತುವೆ ಕಾಮಗಾರಿಯನ್ನು ಜಾರಿಗೊಳಿಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸೋಮಶೇಖರ್‌, ಉಕ್ಕಿನ ಸೇತುವೆ ನಿರ್ಮಾಣ, ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಲುವು ತಿಳಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next