Advertisement
ನವದೆಹಲಿಯ “ಭಾರತ ಮಂಟಪ’ ಜ.4ರಿಂದ ಜ.9ರ ವರೆಗೆ ನಡೆಯಲಿರುವ “ಗ್ರಾಮೀಣ ಭಾರತ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.“2014ರಿಂದ ಕೇಂದ್ರ ಸರ್ಕಾರವು ಗ್ರಾಮಗಳ ಅಭಿವೃದ್ಧಿ ಕಡೆಗೆ ಗಮನ ಹರಿಸಿದೆ. ಆ ಮೂಲಕ 2047ರ ವಿಕಸಿತ ಭಾರತ ಪರಿಕಲ್ಪನೆ ಸಾಕಾರಕ್ಕೆ ನೆರವಾಗಲಿದೆ. ಗ್ರಾಮೀಣ ಜನರ ಘನತೆ ಹಾಗೂ ಜೀವನದ ಗುಣಮಟ್ಟವನ್ನು ಉತ್ತಮಪಡಿಸುವುದೇ ನಮ್ಮ ಸರ್ಕಾರದ ಮುಖ್ಯ ಧ್ಯೇಯ’ ಎಂದು ಪ್ರಧಾನಿ ಹೇಳಿದ್ದಾರೆ.
ಗ್ರಾಮೀಣ ಭಾರತದಲ್ಲಿ ಹೊಂದಿರುವ ಉದ್ಯಮ ಶೀಲತೆಗೆ ಪ್ರೋತ್ಸಾಹ ನೀಡುವ ನಿಟ್ಟನಲ್ಲಿ ಮತ್ತು ಸಾಂಸ್ಕೃತಿಕ ವೈಭವ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಉತ್ಸವ ಆಯೋಜಿಸಲಾಗುತ್ತಿದೆ. ಗ್ರಾಮೀಣ ಕ್ಷೇತ್ರದಲ್ಲಿ ಆರೋಗ್ಯ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ವೃದ್ಧಿಸುವ ಬಗ್ಗೆಯೂ ಇಲ್ಲಿ ಸಮಾಲೋಚನೆ ನಡೆಸಲಾಗುತ್ತದೆ.