Advertisement

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

04:06 AM Jan 05, 2025 | Team Udayavani |

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿಯನ್ನು ಚುರುಕುಗೊಳಿಸಿದ್ದಾರೆ. “ಜಾತಿ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ವಿಷವನ್ನು ಹರಡುತ್ತಿದ್ದಾರೆ. ಇಂಥ ಸಂಚುಗಳಿಂದ ದೂರವಿದ್ದು ಸಂಸ್ಕೃತಿ ಹಾಗೂ ಪರಂಪರೆಗಳನ್ನು ಪರಸ್ಪರ ಹಂಚಿಕೊಂಡು ಬದುಕುವ ಗ್ರಾಮಗಳನ್ನು ಇನ್ನಷ್ಟು ಬಲಪಡಿಸಬೇಕಿದೆ’ ಎಂದು ಕರೆ ನೀಡಿದ್ದಾರೆ.

Advertisement

ನವದೆಹಲಿಯ “ಭಾರತ ಮಂಟಪ’ ಜ.4ರಿಂದ ಜ.9ರ ವರೆಗೆ ನಡೆಯಲಿರುವ “ಗ್ರಾಮೀಣ ಭಾರತ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
“2014ರಿಂದ ಕೇಂದ್ರ ಸರ್ಕಾರವು ಗ್ರಾಮಗಳ ಅಭಿವೃದ್ಧಿ ಕಡೆಗೆ ಗಮನ ಹರಿಸಿದೆ. ಆ ಮೂಲಕ 2047ರ ವಿಕಸಿತ ಭಾರತ ಪರಿಕಲ್ಪನೆ ಸಾಕಾರಕ್ಕೆ ನೆರವಾಗಲಿದೆ. ಗ್ರಾಮೀಣ ಜನರ ಘನತೆ ಹಾಗೂ ಜೀವನದ ಗುಣಮಟ್ಟವನ್ನು ಉತ್ತಮಪಡಿಸುವುದೇ ನಮ್ಮ ಸರ್ಕಾರದ ಮುಖ್ಯ ಧ್ಯೇಯ’ ಎಂದು ಪ್ರಧಾನಿ ಹೇಳಿದ್ದಾರೆ.

ಏನಿದು “ಗ್ರಾಮೀಣ ಭಾರತ ಉತ್ಸವ’
ಗ್ರಾಮೀಣ ಭಾರತದಲ್ಲಿ ಹೊಂದಿರುವ ಉದ್ಯಮ ಶೀಲತೆಗೆ ಪ್ರೋತ್ಸಾಹ ನೀಡುವ ನಿಟ್ಟನಲ್ಲಿ ಮತ್ತು ಸಾಂಸ್ಕೃತಿಕ ವೈಭವ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಉತ್ಸವ ಆಯೋಜಿಸಲಾಗುತ್ತಿದೆ. ಗ್ರಾಮೀಣ ಕ್ಷೇತ್ರದಲ್ಲಿ ಆರೋಗ್ಯ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ವೃದ್ಧಿಸುವ ಬಗ್ಗೆಯೂ ಇಲ್ಲಿ ಸಮಾಲೋಚನೆ ನಡೆಸಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next