ಬೆಂಗಳೂರು: ಬಿಜೆಪಿಯ ರೀತಿ ಕಾಂಗ್ರೆಸ್ ನಲ್ಲೂ ಈಗ ಚುನಾವಣಾ ಗೆಲುವಿಗೆ ಲೆಕ್ಕಾಚಾರಗಳು ಪ್ರಾರಂಭವಾಗಿದ್ದು, ಹಾಲಿ ಶಾಸಕರ ಪೈಕಿ ಕೆಲವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.
ಗೆಲ್ಲುವ ಸಾಮರ್ಥ್ಯ ಹೊಂದಿರುವವರಿಗೆ ಮಾತ್ರ ಮಣೆ ಹಾಕಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಸೋಲುವ ಸಾಧ್ಯತೆ ಇರುವ ಹಾಲಿ ಶಾಸಕರಿಗೆ ಟಿಕೆಟ್ ಕೊಡದಿರುವ ಬಗ್ಗೆ ಚರ್ಚೆ ನಡೆದಿದೆ.
ಕೆಲಸ ಮಾಡದ ಶಾಸಕರ ಕ್ಷೇತ್ರಗಳ ಮೇಲೆ ಹೆಚ್ಚಿನ ಗಮನಹರಿಸಲು ಮುಂದಾಗಿರುವ ನಾಯಕರು 2023ರ ವಿಧಾನಸಭಾ ಚುನಾವಣೆಯನ್ನು ಈಗಿನಿಂದಲೇ ಗಂಭೀರವಾಗಿ ಪರಿಗಣಿಸಿದ್ದಾರೆ.
ಇದನ್ನೂ ಓದಿ:ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ
ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ಸಂಕಲ್ಪ ಹೈಕಮಾಂಡ್ ನಡೆಸಿದೆ. ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆ ಮಾಡುವ ಕುರಿತು ಮಾತುಕತೆ ನಡೆದಿದೆ.
ಆದರೆ ಮುಂದುವರೆದ ಭಾಗವಾಗಿ ಕೆಲಸ ಮಾಡದ ಸೋಲುವ ಶಾಸಕರಿಗೆ ಟಿಕೆಟ್ ಕೊಡದಿರಲು ಚಿಂತನೆ ನಡೆಸಲಾಗಿದ್ದು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಸರ್ವೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.