Advertisement

ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ

04:30 PM May 17, 2022 | keerthan |

ಬೆಂಗಳೂರು: ಬಿಜೆಪಿಯ ರೀತಿ ಕಾಂಗ್ರೆಸ್ ನಲ್ಲೂ ಈಗ ಚುನಾವಣಾ ಗೆಲುವಿಗೆ ಲೆಕ್ಕಾಚಾರಗಳು ಪ್ರಾರಂಭವಾಗಿದ್ದು, ಹಾಲಿ ಶಾಸಕರ ಪೈಕಿ ಕೆಲವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.

Advertisement

ಗೆಲ್ಲುವ ಸಾಮರ್ಥ್ಯ ಹೊಂದಿರುವವರಿಗೆ ಮಾತ್ರ ಮಣೆ ಹಾಕಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಸೋಲುವ ಸಾಧ್ಯತೆ ಇರುವ ಹಾಲಿ ಶಾಸಕರಿಗೆ ಟಿಕೆಟ್ ಕೊಡದಿರುವ ಬಗ್ಗೆ ಚರ್ಚೆ ನಡೆದಿದೆ.

ಕೆಲಸ ಮಾಡದ ಶಾಸಕರ ಕ್ಷೇತ್ರಗಳ ಮೇಲೆ ಹೆಚ್ಚಿನ ಗಮನಹರಿಸಲು ಮುಂದಾಗಿರುವ ನಾಯಕರು 2023ರ ವಿಧಾನಸಭಾ ಚುನಾವಣೆಯನ್ನು ಈಗಿನಿಂದಲೇ ಗಂಭೀರವಾಗಿ ಪರಿಗಣಿಸಿದ್ದಾರೆ.

ಇದನ್ನೂ ಓದಿ:ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ

ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ಸಂಕಲ್ಪ ಹೈಕಮಾಂಡ್ ನಡೆಸಿದೆ. ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆ ಮಾಡುವ ಕುರಿತು ಮಾತುಕತೆ ನಡೆದಿದೆ.

Advertisement

ಆದರೆ ಮುಂದುವರೆದ ಭಾಗವಾಗಿ ಕೆಲಸ ಮಾಡದ ಸೋಲುವ ಶಾಸಕರಿಗೆ ಟಿಕೆಟ್ ಕೊಡದಿರಲು‌ ಚಿಂತನೆ ನಡೆಸಲಾಗಿದ್ದು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಸರ್ವೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next