Advertisement

ವಿವಾಹಕ್ಕೆ ಕೆಲ ಮಾರ್ಗದರ್ಶಿ ಸೂತ್ರ

12:34 PM May 07, 2020 | Suhan S |

ಧಾರವಾಡ: ಕೋವಿಡ್ 19 ಸೋಂಕು ಪತ್ತೆ ಆಗಿರುವ ಕಂಟೈನ್‌ಮೆಂಟ್‌ ಪ್ರದೇಶಗಳನ್ನು ಹೊರತುಪಡಿಸಿ ಜಿಲ್ಲಾದ್ಯಂತ ವಿವಾಹಗಳನ್ನು ನಡೆಸಲು ರಾಜ್ಯ ಸರ್ಕಾರವು ಕೆಲವು ಮಾರ್ಗದರ್ಶಿ ಸೂತ್ರಗಳನ್ನು ಸೂಚಿಸಿದೆ.

Advertisement

ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಗಳು ಮತ್ತು ಇತರ ಸಭೆಗಳನ್ನು ಮೇ 4ರಿಂದ ಜಾರಿಗೆ ಬರುವಂತೆ ಎರಡು ವಾರಗಳ ಅವಧಿಗೆ ನಿಷೇಧಿಸಲಾಗಿದೆ. ಉಳಿದಂತೆ ಮದುವೆಗೆ ಸಂಬಂಧಿಸಿದ ಕೂಟಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಗರಿಷ್ಠ 50ಕ್ಕಿಂತ ಹೆಚ್ಚು ಸಂಖ್ಯೆಯ ಅತಿಥಿಗಳು ಭಾಗವಹಿಸಬಾರದು.

ಸಾರ್ವಜನಿಕ ಸ್ಥಳಗಳಲ್ಲಿ, ಸಮುದಾಯ ಭವನ, ಧಾರ್ಮಿಕ ಸ್ಥಳಗಳಲ್ಲಿ ಮದುವೆಗಳನ್ನು ಹಮ್ಮಿಕೊಳ್ಳಬಾರದು. ವಿವಾಹ ಆಯೋಜನೆಗೆ ಯಾವುದೇ ವಿಶೇಷ ಅನುಮತಿ ಅಗತ್ಯವಿಲ್ಲ. ವಿವಾಹದ ಉದ್ದೇಶಕ್ಕಾಗಿ ಯಾವುದೇ ಅಂತರ ರಾಜ್ಯಗಳ ಸಂಚಾರಕ್ಕೆ ಅನುಮತಿ ಇಲ್ಲ. ಈ ಸಲಹೆಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಿಸಿ ದೀಪಾ ಚೋಳನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next