Advertisement

ಶಕ್ತಿ ಯೋಜನೆಯ ಕೆಲ ಲೋಪಗಳನ್ನು ಸರಿಪಡಿಸಲಾಗುವುದು: ರಾಮಲಿಂಗಾ ರೆಡ್ಡಿ

04:14 PM Jun 25, 2023 | Team Udayavani |

ಹುಬ್ಬಳ್ಳಿ: ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ಹೆಚ್ಚುವರಿ ಅಕ್ಕಿ ನೀಡದಿರುವುದಕ್ಕೆ ರಾಜ್ಯದ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಆರೋಪಿಸಿದರು.

Advertisement

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ನಾವೇನು ಉಚಿತವಾಗಿ ಅಕ್ಕಿ ಕೇಳುತ್ತಿಲ್ಲ. ಹಣ ನೀಡುತ್ತೇವೆ ಎಂದರು.
ರಾಜ್ಯ ಬಿಜೆಪಿ ನಾಯಕರು ಹೇಳಿದ್ದರಿಂದ ಕೇಂದ್ರ ಸರಕಾರ ಅಕ್ಕಿ ನೀಡದೆ ಮಲತಾಯಿ ಧೋರಣೆ ತೋರುತ್ತಿದೆ ಎಂದರು.

ಕಾಂಗ್ರೆಸ್ ಸರಕಾರಕ್ಕೆ ಜನಮನ್ನಣೆ ದೊರೆಯಲಿದೆ ಎಂಬ ಕಾರಣಕ್ಕೆ ಉದ್ದೇಶ ಪೂರ್ವಕವಾಗಿ ಕೇಂದ್ರ ಸರಕಾರ ಅಕ್ಕಿ ನೀಡುತ್ತಿಲ್ಲ ಎಂದರು.
ಅಗಸ್ಟ್ 15ರೊಳಗೆ ಎಲ್ಲ ಗ್ಯಾರಂಟಿ ಜಾರಿಗೊಳಿಸುತ್ತೇವೆ. ಬಿಜೆಪಿಯವರಿಗೆ ಹೋರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ನುಡಿದರು.

ರಾಜ್ಯದಲ್ಲಿ ಮಹಿಳೆಯರಿಗೆ ಸಾರಿಗೆ ಸಂಸ್ಥೆ ಗಳ ಬಸ್ ಗಳಲ್ಲಿ ಉಚಿತ ದೊಡ್ಡ ನಷ್ಟ ಇಲ್ಲ . ಮಹಿಳೆಯರು ಪುಣ್ಯಕ್ಷೇತ್ರಗಳಿಗೆ ಹೆಚ್ಚಾಗಿ ಹೋಗುತ್ತಿದ್ದಾರೆ. ಆರಂಭದಲ್ಲಿ ಹೆಚ್ಚಿನ ಮಹಿಳೆಯರು ಪ್ರಯಾಣಿಸುತ್ತಿದ್ದರು. ಇದೀಗ ಸಂಖ್ಯೆ ಕುಗ್ಗುತ್ತಿದ್ದು ಸರಾಸರಿ ನಿತ್ಯ ಒಂದು ಕೋಟಿ 56 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಎಂದರು.

ಶಕ್ತಿ ಯೋಜನೆಯಲ್ಲಿ ಕೆಲ ಲೋಪಗಳಿದ್ದು ಅವುಗಳನ್ನು ಸರಿಪಡಿಸಲಾಗುವುದು. ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವಂತೆ ಸಾರಿಗೆ ನಿಗಮಗಳ ನಿರ್ವಾಹಕರು ಆಗ ಸಿಬಂದಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next