Advertisement

ವಿಜಯೇಂದ್ರರನ್ನು ವೈಭವೀಕರಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ: ಈಶ್ವರಪ್ಪ ಹೇಳಿಕೆ

12:00 PM Nov 17, 2020 | keerthan |

ಶಿವಮೊಗ್ಗ: ಬಿಜೆಪಿ ಎಂದಿಗೂ ಒಬ್ಬ ವ್ಯಕ್ತಿಯ ಮೇಲೆ ಚುನಾವಣೆ ಮಾಡುವುದಿಲ್ಲ. ಸಂಘಟಿತ ಪ್ರಯತ್ನದಿಂದ ಚುನಾವಣೆ ಮಾಡಿ ಗೆಲುವು ಸಾಧಿಸುತ್ತಿದ್ದೇವೆ. ಆದರೆ ವಿಜಯೇಂದ್ರ ಅವರನ್ನು ವೈಭವೀಕರಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಚುನಾವಣೆ ಸಂದರ್ಭದಲ್ಲಿ ಪ್ರತಿ ಕ್ಷೇತ್ರಕ್ಕೂ ನಾಲ್ಕರಿಂದ ಐದು ಜನರನ್ನು ಉಸ್ತುವಾರಿಯಾಗಿ ನಮ್ಮ ನಾಯಕರು ನೇಮಿಸುತ್ತಾರೆ. ಅದೇ ಮಾದರಿಯಲ್ಲಿ ಶಿರಾ ಹಾಗೂ ಆರ್ ಆರ್ ನಗರಕ್ಕೂ ಉಸ್ತುವಾರಿ ನೇಮಿಸಲಾಗಿತ್ತು. ಶಿರಾದಲ್ಲಿ ಕೆಲಸ ಮಾಡಿದಂತೆ, ಆರ್ ಆರ್ ನಗರದಲ್ಲಿ ಸಚಿವ ಆಶೋಕ್ ಅವರು ಕೆಲಸ ಮಾಡಿದ್ದಾರೆ ಎಂದರು.

ಚುನಾವಣೆ ಗೆಲುವಿನಲ್ಲಿ ವಿಜಯೇಂದ್ರ ಅವರ ಪ್ರಯತ್ನ ಇಲ್ಲ ಎಂದು ನಾನು ಹೇಳುತ್ತಿಲ್ಲ. ಅದರೆ ವೈಭವೀಕರಿಸಲಾಗುತ್ತದೆ. ಆದರೆ, ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ? ಡಿಕೆಶಿ ಗೆ ಬಿಜೆಪಿ ಪ್ರಶ್ನೆ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ಹಿನ್ನೆಲೆಯ ಬಗ್ಗೆ ಮಾತನಾಡಿದ ಅವರು, ಈವರೆಗೆ ರಾಜ್ಯದಲ್ಲಿ ಹಲವು ಪ್ರಾಧಿಕಾರಗಳು ರಚನೆಯಾಗಿವೆ. ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ಪ್ರಾಧಿಕಾರ ರಚನೆ ಮಾಡಿದ್ದಾರೆ. ಅದರೇ, ಈ ಬಗ್ಗೆ ವಿರೋಧ ವ್ಯಕ್ತವಾಗುತ್ತಿದ್ದು, ನಾಳೆಯ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.

Advertisement

ಲಿಂಗಾಯತ ಸಮುದಾಯದವರು ಪ್ರಾಧಿಕಾರ ರಚನೆಗೆ ಒತ್ತಾಯ ಮಾಡುತ್ತಿದ್ದಾರೆ.  ಪ್ರಾಧಿಕಾರ ರಚನೆಗೆ ಒತ್ತಾಯಿಸುವುದು ತಪ್ಪಲ್ಲ. ಈ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next