Advertisement
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಲಾಕ್‌ಡೌನ್-2ರ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕೈಗಾರಿಕೆಗಳನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಪ್ರಾರಂಭಿಸಬಹುದು. ಜಿಲ್ಲಾಡಳಿತ ಈ ಚಟುವಟಿಕೆಗಳಿಗೆ ಆನ್‌ಲೈನ್‌ನಲ್ಲಿ ಸರಳವಾಗಿ ಅನುಮತಿ ನೀಡಲಿದೆ ಎಂದು ತಿಳಿಸಿದರು.
Related Articles
Advertisement
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಎಪಿಎಂಸಿ ರೈತರು ಮತ್ತು ವರ್ತಕರಿಗೆ ಪಾಸ್‌ಗಳ ತೊಂದರೆಯಾಗದಂತೆ ಅಧಿಕಾರಿಗಳು ಸ್ಪಂದಿಸಬೇಕು ಎಂದರು. ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಚೆಕ್‌ಪೋಸ್ಟ್‌ಗಳಲ್ಲಿ ಸೇವೆ ನೀಡುತ್ತಿರುವ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ಸಮರ್ಪಕವಾಗಿ ಪೂರೈಸಬೇಕು. ರಂಜಾನ್ ತಿಂಗಳು ಆರಂಭವಾಗಲಿರುವುದರಿಂದ ಮಾಂಸ ಮಾರಾಟಗಾರರನ್ನು ವಾರ್ಡ್‌ವಾರು ವಿಂಗಡಿಸಿ ಮಾರಾಟ ಘಟಕಗಳನ್ನು ವಿಕೇಂದ್ರಿಕರಣ ಮಾಡಿ, ಸಾಮಾಜಿಕ ಅಂತರದಲ್ಲಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಬೇಕು ಎಂದರು. ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಚೆಕ್ ಪೋಸ್ಟ್‌ಗಳಿಗೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಪ್ರತಿ 8-10 ದಿನಗಳಿಗೊಮ್ಮೆ ಬದಲಾಯಿಸಿ ಬೇರೆಯವರನ್ನು ನಿಯೋಜಿಸಬೇಕು ಎಂದರು.
ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ನವಲಗುಂದ ಕ್ಷೇತ್ರದ ಗಡಿಭಾಗಕ್ಕೆ ಗದಗ ಹಾಗೂ ಬೆಳಗಾವಿ ಜಿಲ್ಲೆಗಳು ಹೊಂದಿಕೊಂಡಿವೆ. ಅಲ್ಲಿನ ಒಳಮಾರ್ಗಗಳಿಂದ ಕೆಲವರು ಜಿಲ್ಲೆಗೆ ಪ್ರವೇಶಿಸುತ್ತಿದ್ದಾರೆ. ಅನ್ಯ ಜಿಲ್ಲೆಯವರಪ್ರವೇಶವನ್ನು ಪರಿಣಾಮಕಾರಿಯಾಗಿ ನಿರ್ಬಂಧಿಸಬೇಕು ಎಂದರು. ಡಿಸಿ ದೀಪಾ ಚೋಳನ್ ಮಾತನಾಡಿ, ಚೆಕ್‌ಪೋಸ್ಟ್ ಸಿಬ್ಬಂದಿಗೆ ಪ್ರತಿವಾರ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಪೂರೈಸಿ ದಾಖಲೆಗಳನ್ನು ನಿರ್ವಹಿಸಲಾಗುತ್ತಿದೆ. ಕಟ್ಟಡ ಮತ್ತು ರಸ್ತೆ ಕಾಮಗಾರಿ ಕೈಗೊಳ್ಳುವ ಇಲಾಖೆಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ತ್ವರಿತವಾಗಿ ಅನುಮತಿ ನೀಡಲಾಗುವುದು ಎಂದರು.
ಶಾಸಕರಾದ ಸಿ.ಎಂ.ನಿಂಬಣ್ಣವರ, ಅಮೃತ ದೇಸಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಜಿ.ಪಂ.ಸಿಇಒ ಡಾ|ಬಿ.ಸಿ. ಸತೀಶ್, ಮಹಾನಗರ ಪಾಲಿಕೆಯ ಆಯುಕ್ತ ಡಾ|ಸುರೇಶ್ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್ ಇದ್ದರು.
ಕೋವಿಡ್-19 ತ್ವರಿತ ತಪಾಸಣೆ : ಹುಬ್ಬಳ್ಳಿಯ ಕಿಮ್ಸ್, ಧಾರವಾಡದ ಡಿಮ್ಹಾನ್ಸ್ ಹಾಗೂ ನೆರೆಯ ಬೆಳಗಾವಿ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಕೋವಿಡ್-19 ತಪಾಸಣಾ ಪ್ರಯೋಗಾಲಯಗಳು ಪ್ರಾರಂಭ ಆಗಿವೆ. ಹೀಗಾಗಿ ಇನ್ನು ಮುಂದೆ ಕೋವಿಡ್ ಪರೀಕ್ಷಾ ಫಲಿತಾಂಶಗಳು ತ್ವರಿತವಾಗಿ ಲಭ್ಯವಾಗಲಿವೆ. ಕಿಮ್ಸ್, ರೈಲ್ವೆ ಆಸ್ಪತ್ರೆ, ಡಿಮ್ಹಾನ್ಸ್, ಎಸ್‌ಡಿಎಂ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆ ಮತ್ತು ಪರೀಕ್ಷೆಗೆ ಅಗತ್ಯವಾದ ಆರೋಗ್ಯ ರಕ್ಷಣಾ ಸಾಮಾಗ್ರಿಗಳ ಪೂರೈಕೆಯಲ್ಲಿ ಕೊರತೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಾಮೂಹಿಕ ಪ್ರಾರ್ಥನೆ ಬೇಡ : ರಂಜಾನ್ ಮಾಸ ಆರಂಭವಾಗಿದ್ದು, ಈ ಮಾಸದಲ್ಲಿ ಉಪವಾಸ ವೃತ ಕೈಗೊಳ್ಳುವವರಿಗೆ ಅವರ ಮನೆ ಬಳಿಯೇ ಡ್ರೆ ಡ್ರೈಪ್ರೂಟ್ಸ್, ಮಾಂಸದ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳು ಪೂರೈಕೆಯಾಗುವಂತೆ ವ್ಯವಸ್ಥೆ ಮಾಡಬೇಕು. ಮಸೀದಿಗಳಲ್ಲಿ ಧರ್ಮ ಗುರುಗಳನ್ನು ಹೊರತುಪಡಿಸಿ ಹೆಚ್ಚು ಜನ ಸೇರಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು. ಆಯಾ ಮಸೀದಿಗಳ ಜಮಾತ್ ಸಮಿತಿಯವರು ತಮ್ಮ ಸದಸ್ಯರಿಗೆ ತಿಳುವಳಿಕೆ ನೀಡಿ ಮನೆಗಳಲ್ಲಿಯೇ ಪ್ರಾರ್ಥನೆ ಮಾಡಲು ಜಾಗೃತಿ ಮೂಡಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಮನವಿ ಮಾಡಿದರು.
ಭಾರತೀಯ ಹತ್ತಿ ನಿಗಮ ನಿಯಮಾನುಸಾರ ಕೂಡಲೇ ರೈತರಿಗೆ ಮಾಹಿತಿ ನೀಡಬೇಕು. ಹತ್ತಿಯ ಗುಣಮಟ್ಟ ಪರಿಶೀಲಿಸಿ ತನ್ನ ಷರತ್ತುಗಳಿಗೆ ಅನುಗುಣವಾಗಿ ಹತ್ತಿ ಖರೀದಿಸಬೇಕು. –ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ