Advertisement

ಶಿಕ್ಷಣ ಕಾಯ್ದೆಯ ಕೆಲ ಸೆಕ್ಷನ್‌ಗಳು ಅಸಾಂವಿಧಾನಿಕ: ಹೈಕೋರ್ಟ್‌

10:41 PM Jan 06, 2023 | Team Udayavani |

ಬೆಂಗಳೂರು: ರಾಜ್ಯ ಸರಕಾರ ನಿಗದಿಪಡಿಸಿದ ರೀತಿಯಲ್ಲಿ ಹೊರತುಪಡಿಸಿ ಇತರ ಕಾರಣಗಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳು ಶುಲ್ಕ ಪಡೆಯುವುದನ್ನು ನಿಷೇಧಿಸುವ ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಸೆಕ್ಷನ್‌ 48 ಅನ್ನು ಅಸಂವಿಧಾನಿಕ ಎಂದು ಹೈಕೋರ್ಟ್‌ ಹೇಳಿದೆ.

Advertisement

ನ್ಯಾ| ಇ.ಎಸ್‌. ಇಂದಿರೇಶ್‌ ಅವರಿದ್ದ ನ್ಯಾಯಪೀಠವು ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸೇರಿ ಕೆಲವು ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿ ಈ ಆದೇಶ ಪ್ರಕಟಿಸಿದೆ.

ನಿಗದಿಗಿಂತಲೂ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಯಂತ್ರಿಸುವ ಸೆಕ್ಷನ್‌ 48ರ ಉಲ್ಲಂಘನೆ ಮಾಡುವ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ 10 ಲಕ್ಷ ರೂ. ದಂಡ ವಿಧಿಸುವುದಕ್ಕೆ ಅವಕಾಶ ನೀಡುವ ಸೆಕ್ಷನ್‌ 124ಎ, ಅನುದಾನ ರಹಿತ ಶಾಲೆಗಳನ್ನು ನಿಯಂತ್ರಿಸುವ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೆ ಅಧಿಕಾರ ಒದಗಿಸುವ ಸೆಕ್ಷನ್‌ 2 (11) (ಎ) ಅಸಂವಿಧಾನಿಕ ಎಂದು ನ್ಯಾಯಪೀಠ ಹೇಳಿದೆ.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಹಕ್ಕುಗಳ ಮೇಲೆ ಸುಪ್ರೀಂ ಕೋರ್ಟ್‌ ರೂಪಿಸಿರುವ ಪ್ರಕಾರ ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಈ ಸೆಕ್ಷನ್‌ಗಳು ಸಂವಿಧಾನ ಪರಿಚ್ಛೇದ 14 ಪರಿಚ್ಛೇದ 19 (1) (ಜಿ) ಅನ್ನು ಉಲ್ಲಂಘನೆ ಮಾಡಿದಂತೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.

ಪೂರ್ವ ಪ್ರಾಥಮಿಕ ಅವಧಿಗೆ ಶುಲ್ಕ ವಿಧಿಸುವುದು ಹಾಗೂ ವಿಶೇಷ ಅಭಿವೃದ್ಧಿ ಶುಲ್ಕ ಸಂಗ್ರಹಿಸುವುದನ್ನು ನಿಯಂತ್ರಿಸಬಹುದಾದ 1995 ಮತ್ತು 1999ರಲ್ಲಿ ಜಾರಿ ಮಾಡಿರುವ ನಿಯಮಗಳು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವುದಿಲ್ಲ. ಮಕ್ಕಳ ಮೇಲಿನ ಲೈಂಗಿಕ ಪ್ರಕರಣದಲ್ಲಿ ಭಾಗಿಯಾದಂತಹ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬಂದಿ, ಸದಸ್ಯರಿಗೆ 6 ತಿಂಗಳು ಕಾಲ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಬಹುದಾದ ಸೆಕ್ಷನ್‌ 112(ಎ) ಸಹ ಉಲ್ಲಂ ಸಿದಂತಾಗಿದೆ ಎಂದು ಹೈ ಕೋರ್ಟ್‌ ಹೇಳಿದೆ.

Advertisement

ಇದರಿಂದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಶುಲ್ಕ ವಿಧಿಸುವುದನ್ನು ನಿಯಂತ್ರಿಸುವುದಕ್ಕೆ ಸರಕಾರಕ್ಕೆ ಇದ್ದ ಅಧಿಕಾರ ರದ್ದಾದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next