Advertisement
ಅಜ್ಜರಕಾಡು ಸಮೀಪದ ವಸತಿ ಸಮುಚ್ಚಯದಲ್ಲಿರುವ ಅವರ ನಿವಾಸಕ್ಕೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ನವದಂಪತಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದಲೂ ಸಮ್ಮಾನಿಸಲಾಯಿತು.
ಈ ಸಂದರ್ಭ ನಳಿನ್ ಅವರು ಮಾತನಾಡಿ, ಈ ದಂಪತಿಯ ಕೆಲಸ ಯುವಕರಿಗೆ ಮಾದರಿ. ಸ್ವತ್ಛತೆಯನ್ನು ತಪಸ್ಸಿನಂತೆ ಮಾಡಿ ಪ್ರಧಾನಿಯ ಮೆಚ್ಚುಗೆ ಗಳಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು. ಇದನ್ನೂ ಓದಿ:ಪಕೃತಿಯ ಮಡಿಲಲ್ಲಿ ಕಂಗೊಳಿಸುತ್ತಿದೆ ದೇವರಗುಂಡಿ ಜಲಪಾತ
Related Articles
ಮುಂದೆ ಶಾಲಾ, ಕಾಲೇಜು, ಹಳ್ಳಿಗಳಿಗೆ ತೆರಳಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕೆಂಬ ಆಶಯವಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಹಾಗೂ ಸೂಕ್ತ ವಿಲೇವಾರಿಯಿಂದ ಪರಿಸರ ಮಾಲಿನ್ಯ ಸಮಸ್ಯೆಗೆ ಅರ್ಧ ಪರಿಹಾರ ಸಿಗುತ್ತದೆ ಎಂದು ಅನುದೀಪ್ ಹೆಗ್ಡೆ – ಮಿನುಷಾ ದಂಪತಿ ತಿಳಿಸಿದರು.
Advertisement
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮೀನುಗಾರಿಕಾ ಪ್ರಕೋಷ್ಠದ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ಪ್ರಮುಖರಾದ ಜಗದೀಶ್ ಅಧಿಕಾರಿ, ಶಿಲ್ಪಾ ಜಿ. ಸುವರ್ಣ ಉಪಸ್ಥಿತರಿದ್ದರು.