ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಬಿಐ ವಶಕ್ಕೆ ಪಡೆದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.
ಈಗಾಗಲೇ ಹಲವು ಬಾರಿ ಸೋಮು ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ಗುರುವಾರ ಬೆಳಗ್ಗೆ ಗದಗದಲ್ಲಿ ನ್ಯಾಮಗೌಡ ಅವರನ್ನು ವಶಕ್ಕೆ ತೆಗೆದುಕೊಂಡು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ಗೆ ಒಳಪಡಿಸಲಾಗಿತ್ತು.
ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಹಾಜರು ಮಾಡಲಾಗಿತ್ತು. ನ್ಯಾಯಾಲಯ ಸೋಮು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸಂಜೆ ಅವರನ್ನು ಧಾರವಾಡದ ಕೇಂದ್ರ ಕಾರಾಗೃಹ ಕ್ಕೆ ಕರೆದೊಯ್ಯಲಾಯತು.
ಇದನ್ನೂ ಓದಿ :ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರು : ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಈಗಾಗಲೇ ವಿನಯ್ ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕರಿಸಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಶುಕ್ರವಾರ ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕರನ್ನು ಸಿಬಿಐ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದರು.