Advertisement

ಸರಕಾರಿ ಆಸ್ಪತ್ರೆಗೆ ವೀಣಾ ಅಚ್ಚಯ್ಯ ಭೇಟಿ

07:35 AM Aug 19, 2017 | Team Udayavani |

ಸೋಮವಾರಪೇಟೆ: ಪಟ್ಟಣದ ಸರಕಾರಿ ಆಸ್ಪತ್ರೆಗೆ ಪೊಲೀಸ್‌ ಭದ್ರತೆ ಕಲ್ಪಿಸಲು ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ ಭರವಸೆ ನೀಡಿದರು.

Advertisement

ಸೋಮವಾರಪೇಟೆ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಅವರು ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ವೈದ್ಯಾಧಿಕಾರಿ ಶರತ್‌ಬಾಬು ಅವರೊಂದಿಗೆ ಚರ್ಚಿಸಿದರು. ಆಸ್ಪತ್ರೆಯಲ್ಲಿ ಮೂವರು ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾಗಿದೆ ಎಂದು ವೈದ್ಯಾಧಿಕಾರಿ ಹೇಳಿದರು.

ಇತ್ತೀಚಿನ‌ ದಿನಗಳಲ್ಲಿ ಸಂಜೆ ಸಮಯದಲ್ಲಿ ಕೆಲವರು ಪಾನಮತ್ತರಾಗಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಮುಂದಾದ ಘಟನೆಗಳು ಸಂಭವಿಸಿವೆ. ವೈದ್ಯರಿಗೆ ಬೆದರಿಕೆ ಹಾಕುವ ಮಟ್ಟಕ್ಕೆ ಬೆಳೆದಿದ್ದಾರೆ. ಈ ಕಾರಣದಿಂದ ಯಾವುದೇ ವೈದ್ಯರು ಸೋಮವಾರಪೇಟೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇರುವ ವೈದ್ಯರು ಇಲ್ಲಿಂದ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಕಾರಣದಿಂದ ವೈದ್ಯರಿಗೆ ಪೊಲೀಸ್‌ ರಕ್ಷಣೆ ಕಲ್ಪಿಸಬೇಕೆಂದು ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ದೀಪಕ್‌ ಒತ್ತಾಯಿಸಿದರು. ಆಸ್ಪತ್ರೆಯಲ್ಲಿ ರûಾ ಸಮಿತಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. 

ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ರಕ್ಷಾ ಸಮಿತಿಗೆ ಆಯ್ಕೆ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.
ವಿರಾಜಪೇಟೆ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ 11 ಮಂದಿ ವೈದ್ಯರು ಕರ್ತವ್ಯ ನಿರ್ವಹಿಸು ತ್ತಿದ್ದಾರೆ. ಆದರೆ ಸೋಮವಾರಪೇಟೆ ಆಸ್ಪತ್ರೆಗೆ ತಜ್ಞ ವೈದ್ಯರನ್ನು ನೇಮಿಸಲು ಇಲ್ಲಿನ ಶಾಸಕರಿಗೆ ಸಾಧ್ಯವಾಗದಿರುವುದು ವಿಪರ್ಯಾಸ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲೋಕೇಶ್‌ ಕುಮಾರ್‌ ದೂರಿದರು.ತಾಲೂಕು ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಸೌಲಭ್ಯ ಸಿಗುತ್ತಿಲ್ಲ. ಕೂಡಲೇ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರು ಹಾಗೂ ಅರವಳಿಕೆ ತಜ್ಞರನ್ನು ನೇಮಿಸಲು ಕ್ರಮಕೈಗೊಳ್ಳಬೇಕೆಂದು ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ ಮನವಿ ಮಾಡಿದರು. 

ಸೋಮವಾರಪೇಟೆ ಸರಕಾರಿ  ಆಸ್ಪತ್ರೆಗೆ ತಜ್ಞ ವೈದ್ಯರ ನೇಮಕಕ್ಕೆ ಆರೋಗ್ಯ ಸಚಿವರೊಂದಿಗೆ ಸಮಾಲೋಚಿಸಿ ಕ್ರಮಕೈಗೊಳ್ಳಲಾಗುವುದು. ಆಸ್ಪತ್ರೆಗೆ ವೈದ್ಯರ ನೇಮಕ ಅಗತ್ಯವಾಗಿದೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ವೈದ್ಯರಿಗೆ ತೊಂದರೆಯಾಗದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು. ತೊಂದರೆಯಾದರೆ ವೈದ್ಯರು ನೇರವಾಗಿ ನನ್ನ ಸಂಪರ್ಕಿಸಬೇಕು ಎಂದು ಹೇಳಿದರು. ಪ್ರತಿ ವಾರ್ಡ್‌ ಗಳಿಗೆ ತೆರಳಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.

Advertisement

ಈ ಸಂದರ್ಭ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಕೆ.ಎ. ಯಾಕೂಬ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ನಂದಕುಮಾರ್‌, ಪಟ್ಟಣ ಪಂಚಾಯಿತಿ ಸದಸ್ಯ ಕೆ.ಎ. ಆದಂ,ಯುವ ಕಾಂಗ್ರೆಸ್‌ ಅಧ್ಯಕ್ಷ ಚೇತನ್‌ ಉಪಸ್ತಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next