Advertisement
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದಿಯಾಗಿ ಬಹುತೇಕ ಎಲ್ಲಾ ಕಾಂಗ್ರೆಸ್ ಮುಖಂಡರೂ ಚುನಾವಣೆಯಲ್ಲಿ ಸ್ಪರ್ಧಿಸಲು “ಕೈ’ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಹುರಿಯಾಳಾಗುತ್ತಿದ್ದ ಎಸ್.ಎಸ್. ಮಲ್ಲಿಕಾರ್ಜುನ್ ಅರ್ಜಿಯನ್ನೇ ಸಲ್ಲಿಸಿಲ್ಲ. ಮಾಜಿ ಸಚಿವರ ನಿಗೂಢ ನಡೆ ಏನು ಎಂಬ ಪ್ರಶ್ನೆ ಕುತೂಹಲ ಮೂಡಿದೆ.
Related Articles
Advertisement
ಸತತ ಸೋಲಿನಿಂದ ಬೇಸರ?: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಸೋಲಿನ ಕಹಿ ಉಂಡಿರುವ ಮಲ್ಲಿಕಾರ್ಜುನ್, 2018ರ ವಿಧಾನಸಭಾ ಚುನಾವಣೆಯಲ್ಲೂ ಸೋಲು ಕಾಣುವಂತಾಗಿದ್ದು ಸ್ವತಃ ಅವರಿಗೆ ಅರಗಿಸಿಕೊಳ್ಳಲಾರದ ಆಘಾತಕ್ಕೆ ಕಾರಣವಾಗಿತ್ತು. ವಿಧಾನಸಭಾ ಚುನಾವಣೆಯ ಅನಿರೀಕ್ಷಿತ ಸೋಲಿನ ನಂತರ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ದಾವಣಗೆರೆಯಲ್ಲೇ ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯರಾಗಿದ್ದರು. ನಿರೀಕ್ಷೆಗೂ ಮೀರಿ ಕಾರ್ಯಕ್ರಮ ಯಶಸ್ವಿಯಾದ ಮೇಲೆ ರಾಜಕೀಯ ಚಟುವಟಿಕೆಯಲ್ಲಿ ಮತ್ತೆ ತೊಡಗಿಸಿಕೊಂಡಿದ್ದರು.
ಸೆ.22ರಂದು ಅಭಿಮಾನಿಗಳ ಬಳಗ ಆಯೋಜಿಸಿದ್ದ ತಮ್ಮ 55ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದಲೇ ಭಾಗವಹಿಸಿದ್ದರು. ಆದರೆ ಈಗ ಟಿಕೆಟ್‌ಗೆ ಅರ್ಜಿ ಸಲ್ಲಿಸದೇ ಇರುವ ಅವರ ರಾಜಕೀಯ ಲೆಕ್ಕಾಚಾರವೇ ನಿಗೂಢವಾಗಿದೆ. ಕೈ ತಪ್ಪಿ ಹೋಗಿದ್ದ ಜಿಲ್ಲೆಯನ್ನು ಮತ್ತೆ ಹಿಡಿತಕ್ಕೆ ಪಡೆಯುವ ಇರಾದೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವರ ನಿರ್ಧಾರ ಬೇಸರ ಮೂಡಿಸಿದೆ. ಚುನಾವಣೆ ಹೊಸ್ತಿಲಲ್ಲಿ ಮಲ್ಲಿಕಾರ್ಜುನ್ ಅವರ ಧೋರಣೆ ಪಕ್ಷಕ್ಕೆ ಸದ್ಯದ ಮಟ್ಟಿಗೆ ಶುಭಸೂಚಕವಂತೂ ಅಲ್ಲ.
ಕೈ ತಪ್ಪಿ ಹೋಗಿತ್ತು ಟಿಕೆಟ್2008ರಲ್ಲಿ ನಡೆದ ಕ್ಷೇತ್ರ ಮರು ವಿಂಗಡಣೆ ನಂತರ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಮೊದಲ ಚುನಾವಣೆಯಲ್ಲೇ ಮಲ್ಲಿಕಾರ್ಜುನ್ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿತ್ತು. ಟಿಕೆಟ್ ದೊರೆಯುವ ನಿರೀಕ್ಷೆಯೊಂದಿಗೆ ಮಲ್ಲಿಕಾರ್ಜುನ್ ಪ್ರಚಾರವನ್ನೂ ಕೈಗೊಂಡಿದ್ದರು. ಆದರೆ ಕಡೆ ಘಳಿಗೆಯಲ್ಲಿ ಬೇರೆಯವರ ಹೆಸರಲ್ಲಿ ಬಿ ಫಾರ್ಮ್ ಬಂದಿತ್ತು. ಹರಸಾಹಸ ಮಾಡಿ ನಾಮಪತ್ರ ಸಲ್ಲಿಸಿದ್ದರೂ ತಾಂತ್ರಿಕ ಕಾರಣದಿಂದ ಮಲ್ಲಿಕಾರ್ಜುನ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಮುಂದಿನ ನಡೆ ಏನು?
ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅರ್ಜಿ ಸಲ್ಲಿಸಿದರೆ ಮಾತ್ರ ಟಿಕೆಟ್ ಎಂಬ ಪರಿಸ್ಥಿತಿ ಏನಿಲ್ಲ. ಆದರೂ ಏಕೆ ಅರ್ಜಿ ಸಲ್ಲಿಸಲಿಲ್ಲ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಲಾರಂಭಿಸಿದೆ. ಮಲ್ಲಿಕಾರ್ಜುನ್ ಅರ್ಜಿ ಸಲ್ಲಿಸದೆ ಇರುವುದಕ್ಕೆ ಕಳೆದ ಚುನಾವಣಾ ಫಲಿತಾಂಶದ ನಿರಾಸೆ ಕಾರಣವೋ ಅಥವಾ ಟಿಕೆಟ್ ಪಕ್ಕಾ ಎಂಬ ವಿಶ್ವಾಸವೋ ಎಂಬುದು ಕುತೂಹಲ ಮೂಡಿಸಿದೆ. *ರಾ.ರವಿಬಾಬು