ನೆಲಮಂಗಲ : ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ದಾಕ್ಷಾಯಿಣಿ ಅಂಜನಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ.
ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ದಾಕ್ಷಾಯಿಣಿ ಅಂಜನಮೂರ್ತಿ ಯನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು ಒಟ್ಟು 21 ಗ್ರಾಮ ಪಂಚಾಯಿತಿ ಸದಸ್ಯರಲ್ಲಿ 15 ಜನ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 6 ಜನ ಕಾಂಗ್ರೆಸ್ ಬೆಂಬಲಿತ ಸದಸ್ಯರ ಒಮ್ಮತದ ಮೇರೆಗೆ ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿಯ ಅಧ್ಯಕ್ಷರನ್ನಾಗಿ ದಾಕ್ಷಾಯಿಣಿ ಅಂಜನಮೂರ್ತಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಈಗಾಗಲೇ ಅಧ್ಯಕ್ಷರಾಗಿ 1ವರ್ಷ ಅವಧಿಯನ್ನು ಪೂರ್ಣಗೊಳಿಸಿದ ಲಕ್ಷ್ಮಿನರಸಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆ ಅವಿರೋಧವಾಗಿ ದಾಕ್ಷಾಯಿಣಿ ಅಂಜನಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದ್ದು ಹಾರ ತುರಾಯಿಗಳನ್ನು ಹಾಕಿ ಸಿಹಿ ಹಂಚಿ ಪಟಾಕಿ ಸಿಡಿಸಿ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ದಾಕ್ಷಾಯಿಣಿ ಅಂಜನಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯಲಹಂಕ ಮಂಡಲ ಬಿಜೆಪಿ ಅಧ್ಯಕ್ಷ ಹನುಮಯ್ಯ ಮಾತನಾಡಿ ನೂತನವಾಗಿ ಅವಿರೋಧ ಆಯ್ಕೆಯಾಗಿರುವ ಅಧ್ಯಕ್ಷೆ ದಾಕ್ಷಾಯಿಣಿರವರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಗ್ರಾಮಗಳ ಅಭಿವೃದ್ಧಿ ಪಡಿಸಲಿ ಎಂದು ಶುಭ ಹಾರೈಸಿದರು.
ಸೊಂಡೆಕೊಪ್ಪ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ದಾಕ್ಷಾಯಿಣಿ ಅಂಜನ ಮೂರ್ತಿ ಮಾತನಾಡಿ ನನ್ನನ್ನು ಅವಿರೋಧ ಆಯ್ಕೆಗೆ ಕಾರಣರಾದ ಯಲಹಂಕ ಶಾಸಕ ಎಸ್ಆರ್ವಿಶ್ವನಾಥ್,ಬಿಜೆಪಿ ಮಂಡಲ ಅಧ್ಯಕ್ಷ ಹನುಮಯ್ಯ,ಸೊಂಡೆಕೊಪ್ಪ ಜಿಲ್ಲಾ ಪಂಚಾಯ್ತಿ ಸದಸ್ಯ ರವಿಕುಮಾರ್,ಕೊಳ್ಳಿಗನಹಳ್ಳಿ ವೆಂಕಟೇಶ್,ಯಲಹಂಕ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಜನಾರ್ದನ್,ಯುವ ಮೋರ್ಚಾ ಅಧ್ಯಕ್ಷ ಸಂದೀಪ್,ಬಿಜೆಪಿ ಮುಖಂಡ ಹರೀಶ್,ಕಿತ್ತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸೇಗೌಡ,ಶಶಿಧರ್, ಬಸವರಾಜ್, ನಾಗಯ್ಯ, ಕುಮಾರ್ ಸೇರಿದಂತೆ ಇನ್ನಿತರರ ಸಹಕಾರದಿಂದ ಅವಿರೋಧವಾಗಿ ಅಧ್ಯಕ್ಷೆ ಆಗಿದ್ದೇನೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ನೀಡುವ ಮೂಲಕ ಅಭಿವೃದ್ಧಿ ಪಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು.