Advertisement
“ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು ಹೊಂದಿರುವ ನಾನು ಸಾಕಷ್ಟು ಏಳು -ಬಿಳುಗಳನ್ನು ಕಂಡಿದ್ದೇನೆ. ಜೀವನದಲ್ಲಿನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಸಹ ನಿರ್ಧರಿಸಿದ್ದೆ, ಆದರೆ ತಂದೆ-ತಾಯಿಯನ್ನಯ ನೆನೆದು ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು ಹೌದು. ಅವರ ಪ್ರೋತ್ಸಾಹದಿಂದ ಈ ಸಿನಿಮಾ ಆರಂಭವಾಯಿತು. ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ. “ಕಡಲೂರ ಕಣ್ಮಣಿ’ಯನ್ನು ನಾನು ವಜ್ರ ಎನ್ನುತ್ತೇನೆ. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಚಿತ್ರಕ್ಕೆ ಸಂಗೀತ ನೀಡುವಂತೆ ಸಂಗೀತ ನಿರ್ದೇಶಕರೊಬ್ಬರನ್ನು ಕೇಳಲಾಗಿತ್ತು. ಆದರೆ ಅವರು ಆರು ತಿಂಗಳಾದರು ಒಂದು ಹಾಡು ಮಾಡಿ ಕೊಡಲಿಲ್ಲ. ಕೊನೆಗೆ ನಿರ್ಮಾಪಕರ ಒತ್ತಾಯಕ್ಕೆ ಮಣಿದು ನಾನೇ ಸಂಗೀತ ನಿರ್ದೇಶನ ಮಾಡಿದ್ದೇನೆ’ ಎಂದರು ನಿರ್ದೇಶಕ ರಾಮ್ ಪ್ರಸನ್ನ ಹುಣಸೂರು.
Related Articles
Advertisement