Advertisement

‘ನಗುವಿನ ಹೂಗಳ ಮೇಲೆ’ಹಾಡು ಬಂತು

04:28 PM Feb 13, 2023 | Team Udayavani |

“ಆಮ್ಲೆಟ್’, “ಕೆಂಪಿರ್ವೆ’ ಖ್ಯಾತಿಯ ವೆಂಕಟ್‌ ಭಾರದ್ವಾಜ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮತ್ತೂಂದು ಬಹು ನಿರೀಕ್ಷಿತ ಚಿತ್ರ “ನಗುವಿನ ಹೂಗಳ ಮೇಲೆ’. ಅಭಿದಾಸ್‌, ಶರಣ್ಯ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರ ಪ್ರೇಕ್ಷಕರೆದುರು ಸಜ್ಜಾಗಿದೆ. ಇದೀಗ ಸಿನಿಮಾ ತಂಡ ಚಿತ್ರದ ಮೊದಲ ಹಾಡನ್ನು ಜೀ ಮ್ಯೂಸಿಕ್‌ನಲ್ಲಿ ಬಿಡುಗಡೆ ಮಾಡಿದೆ.

Advertisement

ಪ್ರಮೋದ್‌ ಮರವಂತೆ ಸಾಹಿತ್ಯದಲ್ಲಿ ಅರಳಿರುವ “ಇರಲಿ ಬಿಡು ಈ ಜೀವ ನಿನಗಾಗಿ’ ರೋಮ್ಯಾಂಟಿಕ್‌ ಹಾಡಿಗೆ ತಜೇಂಧರ್‌ ಸಿಂಗ್‌, ನಿಹಾರಿಕ ನಾಥ್‌ ದನಿಯಾಗಿದ್ದು, ಲವ್‌ ಪ್ರಾನ್‌ ಮೆಹತಾ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದೆ. ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ ಪ್ರಚಾರ ಕಾರ್ಯ ಆರಂಭಿಸಿದೆ ಚಿತ್ರತಂಡ. ಸೆನ್ಸಾರ್‌ ಗೆ ರೆಡಿಯಾಗಿರುವ ಚಿತ್ರ ಏಪ್ರಿಲ್‌ನಲ್ಲಿ ಬೆಳ್ಳಿ ಪರದೆ ಮೇಲೆ ಬರಲಿದೆ.

ರೋಮ್ಯಾಂಟಿಕ್‌ ಹಾಗೂ ಆಕ್ಷನ್‌ ಕಥಾಹಂದರ ಒಳಗೊಂಡ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ವೆಂಕಟ್‌ ಭಾರದ್ವಾಜ್‌ ನಿರ್ದೇಶನ ಮಾಡಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿಗಳಿಸಿರುವ ಅಭಿದಾಸ್‌, ಶರಣ್ಯ ಶೆಟ್ಟಿ ಚಿತ್ರದಲ್ಲಿ ನಾಯಕ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next