Advertisement

ಸಖತ್‌ ಸಾಂಗ್‌ ರಿಲೀಸ್‌: ‘ಪ್ರೇಮಕ್ಕೆ ಕಣ್ಣಿಲ್ಲಾ’ ಎಂದ ಗೋಲ್ಡನ್ ಸ್ಟಾರ್

09:50 AM Oct 10, 2021 | Team Udayavani |

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಾಯಕನಾಗಿಅಭಿನಯಿಸುತ್ತಿರುವ “ಸಖತ್‌’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ. ಇದರ ನಡುವೆಯೇ “ಸಖತ್‌’ ಚಿತ್ರದ “ಪ್ರೇಮಕ್ಕೆ ಕಣ್ಣಿಲ್ಲಾ..’ ಎಂಬ ಮೊದಲ ಹಾಡು ಶನಿವಾರ (ಅ.09) ದಂದು ಬಿಡುಗಡೆಯಾಗಿದ್ದು, ಈ ಮೂಲಕ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯಕ್ಕೂ ಚಾಲನೆ ನೀಡಿದೆ.

Advertisement

ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನವಿರುವ ಈ ಹಾಡಿಗೆ ಜಯಂತ್‌ ಕಾಯ್ಕಿಣಿ ಸಾಹಿತ್ಯವಿದ್ದು, ಹಾಡಿನಲ್ಲಿ ಗಣೇಶ್‌ ಜೊತೆಗೆ ನಿಶ್ವಿ‌ಕಾ ನಾಯ್ಡು ಹೆಜ್ಜೆ ಹಾಕಿದ್ದಾರೆ. ಸದ್ಯ ಬಿಡುಗಡೆಯಾಗಿರುವ “ಪ್ರೇಮಕ್ಕೆ ಕಣ್ಣಿಲ್ಲಾ…’ ಹಾಡು ಸೋಶಿಯಲ್‌ ಮೀಡಿಯಾಗಳಲ್ಲಿ ನಿಧಾನವಾಗಿ ನೋಡುಗರ ಗಮನ ಸೆಳೆಯುತ್ತಿದೆ.

“ಕೆವಿಎನ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ನಿಶಾ ವೆಂಕಟ್‌ ಕೋನನ್ಶಿ ಮತ್ತು ಸುಪ್ರಿತ್‌ “ಸಖತ್‌’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, “ಚಮಕ್‌’ ಚಿತ್ರದ ನಂತರ ಸಿಂಪಲ್‌ ಸುನಿ ಎರಡನೇ ಬಾರಿಗೆ ಗಣೇಶ್‌ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಟಿವಿ ರಿಯಾಲಿಟಿ ಶೋ ಹಾಗೂ ಕೋರ್ಟ್‌ ಕೇಸ್‌ ಸುತ್ತ “ಸಖತ್‌’ ಚಿತ್ರದ ಕಥೆ ಹೆಣೆಯಲಾಗಿದ್ದು, ರೊಮ್ಯಾಂಟಿಕ್‌ ಕಾಮಿಡಿ ಮತ್ತು ಕ್ರೈಂ-ಥ್ರಿಲ್ಲರ್‌ ಶೈಲಿಯಲ್ಲಿ ಚಿತ್ರ ಮೂಡಿಬರುತ್ತಿದೆ.

ಇದನ್ನೂ ಓದಿ:ಕನ್ನಡದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ!

ಚಿತ್ರದಲ್ಲಿ ಮೊದಲ ಬಾರಿಗೆ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌, ಅಂಧ ಗಾಯಕನಾಗಿ ರಿಯಾಲಿಟಿ ಶೋ ಸ್ವರ್ಧಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಿಶ್ವಿ‌ಕಾ ನಾಯ್ಡು ಹಾಗೂ ಹೊಸ ಪ್ರತಿಭೆ ಸುರಭಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದ್ದು, ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ನವೆಂಬರ್‌ ವೇಳೆಗೆ “ಸಖತ್‌’ ತೆರೆಗೆ ಬರುವ ಯೋಚನೆಯಲ್ಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next