Advertisement

ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ –ರಾಹುಲ್

11:14 AM Oct 03, 2022 | Team Udayavani |

ಬೆಂಗಳೂರು: ಇಂದು ಮಧ್ಯಾಹ್ನ 12.30ಕ್ಕೆ ಮೈಸೂರಿಗೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳಿ ರಾಹುಲ್ ಗಾಂಧಿ ಜತೆ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ.

Advertisement

ಸೋನಿಯಾ ಆಗಮನ ಹಿನ್ನಲೆಯಲ್ಲಿ ಪಾದಯಾತ್ರೆ ಮುಗಿಸಿ ರಾಹುಲ್ ಗಾಂಧಿ ಕೊಡಗಿಗೆ ತೆರಳಲಿದ್ದಾರೆ.

ಅಕ್ಟೋಬರ್ 4 ಹಾಗೂ 5 ರಂದು ಪಾದಯಾತ್ರೆಗೆ ವಿರಾಮ ನೀಡಲಿದ್ದು, ಎರಡು ದಿನ ತಾಯಿ ಜೊತೆ ಕೊಡಗಿನಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸಿದ್ದರಾಮಯ್ಯ ಕಾಲದ ಶಿಕ್ಷಕರ ಅಕ್ರಮ ನೇಮಕಕ್ಕೆ ಮರುಜೀವ ಕೊಟ್ಟ ಬಿಜೆಪಿ

ಅಕ್ಟೋಬರ್ 6 ರಂದು ಮಂಡ್ಯ ಜಿಲ್ಲೆಯ ಮಹದೇಶ್ವರಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಅಂದು ಮೇಲುಕೋಟೆಯಲ್ಲಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಕೆಲ ಹೊತ್ತು ಭಾಗಿಯಾಗುತ್ತಾರೆ. ಅಕ್ಟೋಬರ್ 7 ರಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದು, ನಾಗಮಂಗಲದಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ. ಆದಿ ಚುಂಚನಗಿರಿ ಮಠಕ್ಕೂ ಪ್ರಿಯಾಂಕಾ ಗಾಂಧಿ ಭೇಟಿ ಸಾಧ್ಯತೆ ಇದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next