ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜ್ವರದ ಹಿನ್ನೆಲೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ಇರಿಸಿದೆ, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಈ ವರ್ಷದಲ್ಲಿ ಸೋನಿಯಾ ಗಾಂಧಿ ಅವರು 2 ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಜನವರಿ 12ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜನವರಿ 17ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.2023 ರ ಮಾರ್ಚ್ 2 ರಂದು ಜ್ವರದ ಕಾರಣ ಸೋನಿಯಾ ಗಾಂಧಿ ಮತ್ತೆ ಅದೇ ಆಸ್ಪತ್ರೆಗೆ ದಾಖಲಾಗಿದ್ದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು ಇತ್ತೀಚೆಗೆ ಆಗಸ್ಟ್ 31 ರಂದು ಮುಂಬೈನಲ್ಲಿ ನಡೆದ ವಿರೋಧ ಪಕ್ಷದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದರು ಅವರು ಜೊತೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಅವರು ದೆಹಲಿಗೆ ವಾಪಸ್ ಆಗಿದ್ದರು.