ಹೊಸದಿಲ್ಲಿ: ಕೋವಿಡ್ 19 ಸೋಂಕಿಗೆ ಒಳಗಾಗಿರುವ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅವರು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಕೆ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ ಎಂದು ವರದಿಯಾಗಿದೆ.
” ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಆರೋಗ್ಯ ಸ್ಥಿರವಾಗಿದೆ” ಎಂದು ರಣದೀಪ್ ಸುರ್ಜೇವಾಲ ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ನಾಲ್ಕನೇ ಅಲೆ ಭೀತಿ: 8582 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ!
ಜೂನ್ ಒಂದರಂದು ಸೋನಿಯಾ ಗಾಂಧಿಯವರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿತ್ತು. ಜೂನ್ 8 ರಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು. ಕೋವಿಡ್ ಸೋಂಕು ದೃಢವಾದ ಕಾರಣ ಜೂನ್ 23 ರಂದು ಹಾಜರಾಗಲು ಇಡಿ ಹೇಳಿದೆ.
ಜೂ.13ರಂದು ನ್ಯಾಶನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿಯವರಿಗೆ ಇಡಿ ನೋಟಿಸ್ ನೀಡಿದೆ.