Advertisement

ಡಿಕೆ ಶಿವಕುಮಾರ್ ಗೆ ಸೋನಿಯಾ, ರಾಹುಲ್ ಗಾಂಧಿ ದೂರವಾಣಿ ಕರೆ; ಶೀಘ್ರ ಗುಣಮುಖರಾಗುವಂತೆ ಹಾರೈಕೆ

04:13 PM Aug 25, 2020 | keerthan |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೋವಿಡ್-19 ಸೋಂಕಿತರಾದ ಹಿನ್ನಲೆಯಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

Advertisement

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ.ಕೆ ಶಿವಕುಮಾರ್ ಅವರಿಗೆ ಸೋನಿಯಾ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಎಐಸಿಸಿ ಮುಖಂಡರು ಮಂಗಳವಾರ ಮಧ್ಯಾಹ್ನ ದೂರವಾಣಿ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಆದಷ್ಟು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಕೋವಿಡ್ ಸೋಂಕು ದೃಢವಾದ ಕಾರಣ ಡಿ ಕೆ ಶಿವಕುಮಾರ್ ಅವರು ರಾಜಾಜಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ ಕೋವಿಡ್ ಸೋಂಕಿನಿಂದ ಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next