ನವದೆಹಲಿ: ಕೊರೊನಾ ದೃಢಪಟ್ಟು ನವದೆಹಲಿಯ ಗಂಗಾರಾಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.
ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಜೂ.12ರಂದು ಸೋನಿಯಾರ ಮೂಗಿನಲ್ಲಿ ರಕ್ತ ಸೋರುತ್ತಿದ್ದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಜತೆಗೆ ಅವರಿಗೆ ವೈದ್ಯಕೀಯ ತಪಾಸಣೆಯನ್ನೂ ನಡೆಸಲಾಗಿದೆ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜೂ.23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ.ಈಗಾಗಲೇ ಸಮನ್ಸ್ ನೀಡಿದೆ.