Advertisement

ಸೋನಿಯಾಗೆ ಶುಭಾಶಯ

08:10 AM Dec 10, 2018 | Team Udayavani |

ಹೊಸದಿಲ್ಲಿ: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರವಿವಾರ 72ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಧಾನಿ ಮೋದಿ, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ ಸೇರಿದಂತೆ ಅನೇಕ ಗಣ್ಯರು ಜನ್ಮದಿನದ ಶುಭಾಶಯ ಹೇಳಿದ್ದಾರೆ. ಇದೇ ವೇಳೆ, ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್‌, ಕನಿಮೋಳಿ, ಎ.ರಾಜಾ ಅವರು ಸೋನಿಯಾ ನಿವಾಸಕ್ಕೆ ತೆರಳಿ ಶುಭಾಶಯ ಕೋರಿದ್ದಾರೆ. ಜತೆಗೆ, 16ರಂದು ಚೆನ್ನೈನಲ್ಲಿ ಎಂ. ಕರುಣಾನಿಧಿಯವರ ಪ್ರತಿಮೆ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸುವಂತೆ ಸೋನಿಯಾ ಹಾಗೂ ರಾಹುಲ್‌ಗೆ ಆಹ್ವಾನವನ್ನೂ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next