ಜೈಪುರ: ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ತಮ್ಮ ಜನ್ಮದಿನವನ್ನು ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ ಆಚರಿಸಿಕೊಂಡರು.
Advertisement
ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾರೊಂದಿಗೆ ಹುಟ್ಟುಹಬ್ಬ ಆಚರಿಸಲೆಂದೇ ಅವರು ರಾಜಸ್ಥಾನಕ್ಕೆ ಆಗಮಿಸಿದ್ದಾರೆ. ಅವರ ಸಫಾರಿಯ ಫೋಟೋಗಳು ಟ್ವಿಟರ್ನಲ್ಲಿ ಅಪ್ಲೋಡ್ ಆಗಿವೆ.
76ನೇ ವಸಂತಕ್ಕೆ ಕಾಲಿಟ್ಟ ಸೋನಿಯಾ ಅವರಿಗೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕರು ಶುಭ ಹಾರೈಸಿದ್ದಾರೆ.