Advertisement

ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್‌

09:00 PM Jun 20, 2022 | Team Udayavani |

ನವದೆಹಲಿ: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

Advertisement

ನವದೆಹಲಿಯ ಗಂಗಾರಾಮ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿರುವ ಅವರು ಕೆಲ ದಿನಗಳ ಕಾಲ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಹಗರಣಕ್ಕೆ ಸಂಬಂಧಪಟ್ಟಂತೆ ಸೋನಿಯಾ ಅವರಿಗೆ ಜೂ.23ರಂದು (ಗುರುವಾರ) ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯವು ಸಮನ್ಸ್‌ ಕೊಟ್ಟಿದೆ. ಅದಕ್ಕೂ ಮೊದಲು ಜೂ.8ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್‌ ಕೊಡಲಾಗಿತ್ತಾದರೂ ಕೊರೊನಾ ದೃಢವಾದ ಹಿನ್ನೆಲೆ ಅವರು ಇ.ಡಿ. ಬಳಿ ಕಾಲಾವಕಾಶ ಕೇಳಿದ್ದರು. ಇದೀಗ ಸೋಂಕಿನಿಂದ ಚೇತರಿಸಿಕೊಂಡಿ ಅವರು, ಗುರುವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next