Advertisement

Congress: ಕರ್ನಾಟಕದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಪ್ರವೇಶ?

10:19 PM Jul 21, 2023 | Team Udayavani |

ನವದೆಹಲಿ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20ರಲ್ಲಿ ಜಯ ಸಾಧಿಸುವ ಬಗ್ಗೆ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಗುರಿ ಹಾಕಿಕೊಂಡಿರುವಂತೆಯೇ ಹೊಸ ಅಂಶ ಬೆಳಕಿಗೆ ಬಂದಿದೆ.

Advertisement

ಸದ್ಯ ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಸೋನಿಯಾ ಗಾಂಧಿಯವರು ಕರ್ನಾಟಕದಿಂದ ರಾಜ್ಯಸಭೆ ಪ್ರವೇಶಿಸುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆಂದು ಮೂಲಗಳನ್ನು ಉಲ್ಲೇಖೀಸಿ “ಇಂಡಿಯಾ ಟುಡೇ’ ವರದಿ ಮಾಡಿದೆ. ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುತ್ತಿರುವ ಜಿ.ಸಿ.ಚಂದ್ರಶೇಖರ್‌, ಸಯ್ಯದ್‌ ನಾಸಿರ್‌ ಹುಸೇನ್‌, ಡಾ.ಎಲ್‌.ಹನುಮಂತಯ್ಯ, ಕೇಂದ್ರದಲ್ಲಿ ಸಚಿವರಾಗಿರುವ ರಾಜೀವ್‌ ಚಂದ್ರಶೇಖರ್‌ ಅವರ ಸದಸ್ಯತ್ವದ ಅವಧಿ 2024 ಏ.2ರಂದು ಮುಕ್ತಾಯವಾಗಲಿದೆ.

ಅದನ್ನು ಗಮನಿಸಿಕೊಂಡೇ ಜು.18ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷಗಳ ಸಭೆಗೆ ಆಗಮಿಸಿದ್ದ ಸೋನಿಯಾ ಗಾಂಧಿಯವರ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಿಂದಲೇ ರಾಜ್ಯಸಭೆಗೆ ಸ್ಪರ್ಧೆ ಮಾಡಬಹುದು ಎಂಬ ಆಹ್ವಾನ ನೀಡಿದ್ದಾರೆಂದು ಚಾನೆಲ್‌ ತನ್ನ ವರದಿಯಲ್ಲಿ ಹೇಳಿಕೊಂಡಿದೆ. ಆದರೆ, ಸೋನಿಯಾ ಅದರ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ 135 ಶಾಸಕರ ಬಲ ಇರುವುದರಿಂದ ನಾಲ್ಕು ಸ್ಥಾನಗಳ ಪೈಕಿ ಮೂರರಲ್ಲಿ ಅನಾಯಾಸವಾಗಿ ಗೆಲ್ಲಲು ಸಾಧ್ಯವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next