Advertisement
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರನ್ನೂ ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.
Related Articles
Advertisement
ಇನ್ನು, ಆಗಸ್ಟ್ 9 (ಸೋಮವಾರ)ರ ರಾತ್ರಿ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ದೆಹಲಿ ನಿವಾಸದಲ್ಲಿ ವಿಪಕ್ಷ ನಾಯಕರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಔತಣಕೂಟದಲ್ಲಿ ಹಲವಾರು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆಯೂ ನಡೆಯಿತು.
ಇದುಕಪಿಲ್ ಸಿಬಲ್ ಹುಟ್ಟುಹಬ್ಬದ ಆಚರಣೆಯಾಗಿದ್ದರೂ, ಈ ಸಭೆಯು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಗೆ ತಂತ್ರಗಾರಿಕೆಯ ಕೇಂದ್ರವಾಯಿತು. ಕಾಂಗ್ರೆಸ್ ಪಕ್ಷವನ್ನು ಮತ್ತೆ ಬಲಪಡಿಸಯವ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಗಾಂಧಿ ಕುಟುಂಬಿಕರನ್ನು ನಾಯಕತ್ವದ ಹಿಡಿತದಿಂದ ಮುಕ್ತಗೊಳಿಸಿದರೆ ಮಾತ್ರ ಇದು ಸಾಧ್ಯ ಎಂದು ಕೆಲವು ನಾಯಕರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಸಂದರ್ಭದಲ್ಲಿ ಗಾಂಧಿ ಕುಟುಂಬದವರು ಭಾಗವಹಿಸಿರಲಿಲ್ಲ.
ಕಳೆದ ವರ್ಷ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರವೊಂದನ್ನು ಬರೆದ ಸಿಬಲ್ ಅವರು, 2014 ರಲ್ಲಿ ಅಧಿಕಾರ ಕಳೆದುಕೊಂಡ ನಂತರ ಪಕ್ಷದ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಸಕ್ರಿಯ, ಗೋಚರ ನಾಯಕತ್ವ ಮತ್ತು ಆಂತರಿಕ ಚುನಾವಣೆಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಪತ್ರ ಬರೆಯಲಾಗಿತ್ತು.
ಪಕ್ಷದಲ್ಲಿ ನಾಯಕತ್ವ ಬದಲಾವಣೆಗೆ ಒತ್ತಾಯಿಸುವ ಇತರ ನಾಯಕರನ್ನು ಇಲ್ಲಿ ಆಹ್ವಾನಿಸಲಾಗಿತ್ತು. ಪಿ ಚಿದಂಬರಂ, ಶಶಿ ತರೂರ್ ಮತ್ತು ಆನಂದ್ ಶರ್ಮಾ ಔತಣ ಕೂಟದಲ್ಲಿ ಭಾಗವಹಿಸಿದ್ದರು.
ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಶಿವಸೇನೆಯ ಸಂಜಯ್ ರಾವತ್, ಎನ್ ಸಿಪಿಯ ಶರದ್ ಪವಾರ್, ತೃಣಮೂಲದ ಡೆರೆಕ್ ಒಬ್ರೈನ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನ ಒಮರ್ ಅಬ್ದುಲ್ಲಾ ಸೇರಿದಂತೆ ವಿರೋಧ ಪಕ್ಷದ ನಾಯಕರು ಹಾಜರಿದ್ದರು.
ಈ ಎಲ್ಲಾ ಬೆಳವಣಿಗೆಗಳು ರಾಷ್ಟ್ರೀಯ ಕಾಂಗ್ರೆಸ್ ಇಬ್ಭಾಗವಾಗುವ ಲಕ್ಷಣವೇ ಎಂಬ ಚರ್ಚೆಗಳು ರಾಷ್ಟ್ರ ರಾಜಕಾರಣದಲ್ಲಿ ಹರಿದಾಡಿತ್ತು.
ಇದನ್ನೂ ಓದಿ : ಇಂದಿನಿಂದ ಲಾರ್ಡ್ಸ್ ಟೆಸ್ಟ್: ಮಯಾಂಕ್ ಫಿಟ್, ಆರಂಭಿಕ ಜೋಡಿ ಬಗ್ಗೆ ಕೊಹ್ಲಿ ಹೇಳಿದ್ದೇನು?