Advertisement
ಇವರೆಂಥಾ ಪ್ರಧಾನಿ?: ಕೇಂದ್ರ ಸರಕಾರವು ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ, ರೈತರನ್ನು ನಿರ್ಲಕ್ಷಿಸುತ್ತಿದೆ, ಜನರ ಮೇಲೆ ಪರಿಣಾಮ ಬೀರುತ್ತಿರುವಂಥ ವಿಚಾರಗಳ ಬಗ್ಗೆ ಮೌನ ವಹಿಸಿದೆ. ಕಾರ್ಪೊರೇಟ್ ಸಂಸ್ಥೆಗಳ ಸಾಲ ಮನ್ನಾ ಮಾಡುವ ಸರಕಾರ, ದೇಶದ ರೈತರ ಸಾಲ ಮನ್ನಾ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚೀನ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಡೋಕ್ಲಾಂ ಬಿಕ್ಕಟ್ಟು ಕುರಿತು ಒಂದೇ ಒಂದು ಪದವನ್ನೂ ಮಾತನಾಡಿಲ್ಲ. ಇವರೆಂಥಾ ಪ್ರಧಾನಿ ಎಂದೂ ರಾಹುಲ್ ಪ್ರಶ್ನಿಸಿದ್ದಾರೆ.ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಅಸೆಂಬ್ಲಿ ಚುನಾವಣೆಯಲ್ಲಿ ಮಾತ್ರ ವಲ್ಲ, 2019ರ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಸಮಾಜದ ಎಲ್ಲ ವರ್ಗಗಳ ಜನರನ್ನೂ ಒಂದುಗೂ ಡಿಸುವ ಮತ್ತು ಪ್ರೀತಿಯನ್ನು ಹರಡುವ ಕೆಲಸ ಮಾಡಿದೆ. ಆದರೆ, ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರ ಸಿಂಹದ ಮರಿಗಳಿದ್ದಂತೆ. ಅವರು ಸತ್ಯಕ್ಕಾಗಿ ಮತ್ತು ದೇಶಕ್ಕಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ
Rallyಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಜನರ ಭದ್ರತೆ, ಸುರಕ್ಷತೆಯ ಭೀತಿ, ನಿರುದ್ಯೋಗ ಸಮಸ್ಯೆ, ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಜನರನ್ನು ಆತಂಕಕ್ಕೆ ದೂಡಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ನಿಸ್ಸಾರಗೊಳಿಸುವ ಮೂಲಕ ಮೋದಿ ಸರಕಾರವು ಪ್ರಜಾಪ್ರಭುತ್ವವನ್ನೇ ಅಪಾಯಕ್ಕೆ ತಳ್ಳಿದೆ. ವಿಪಕ್ಷಗಳ ಅವಿಶ್ವಾಸ ಗೊತ್ತುವಳಿಯ ಚರ್ಚೆ ಆಗಬಾರದು ಎಂಬ ಉದ್ದೇಶಕ್ಕೆ ಸಂಸತ್ ಕಲಾಪವನ್ನೇ ವ್ಯರ್ಥಗೊಳಿಸಲಾಗಿದೆ. ಇದೆಲ್ಲವೂ ಅಪಾಯದ ಸೂಚಕ. ಪ್ರಜಾಸತ್ತೆ ಎನ್ನುವುದು ದೇಶದ ಸಂವಿಧಾನದ ಕೊಡುಗೆ. ಅದನ್ನು ಬಲಗೊಳಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದೂ ಹೇಳಿದರು ಸಿಂಗ್.
Related Articles
– ಅಮಿತ್ ಶಾ, ಬಿಜೆಪಿ ಅಧ್ಯಕ್ಷ
Advertisement