ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು (ಮಂಗಳವಾರ) ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ನಾಳೆ (ಬುಧವಾರ) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಇ.ಡಿ ಕಚೇರಿಗೆ ತೆರಳಿದ ಸೋನಿಯಾ ಗಾಂಧಿ ಅವರನ್ನು ಅಧಿಕಾರಿಗಳು ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿ ಸೋನಿಯಾ ಗಾಂಧಿ ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
ಜುಲೈ 21 ರಂದು ಇಡಿ ಎರಡು ಗಂಟೆಗಳ ಕಾಲ ಸೋನಿಯಾ ಅವರನ್ನು ಪ್ರಶ್ನಿಸಿತ್ತು.
ಜುಲೈ 21 ರಂದು ಇ.ಡಿ ಎರಡು ಗಂಟೆಗಳ ಕಾಲ ಸೋನಿಯಾ ಅವರನ್ನು ಪ್ರಶ್ನಿಸಿತ್ತು. ಇಂದು ಮತ್ತೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದು 6 ಗಂಟೆಗಳ ಕಾಲ ವಿಚಾರಣೆ ನಡೆಸಿ ಬಳಿಕ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಇತ್ತ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೊಳಪಡಿಸಿದರೆ ಅತ್ತ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮುಖಂಡರು ಪ್ರತಿಭಟನೆಗೆ ಇಳಿದಿದ್ದಾರೆ, ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.